Publish Date: Fri, 18 Feb 2022 (11:52 IST)
Updated Date: Fri, 18 Feb 2022 (10:16 IST)
ನವದೆಹಲಿ: ಮನೆಗೆ ನುಗ್ಗಿ ಕಳ್ಳತನ ಮಾಡಲೆತ್ನಿಸಿದ 30 ವರ್ಷದ ಯುವಕನನ್ನು ಗ್ರಾಮಸ್ಥರೇ ಹಿಡಿದು ಥಳಿಸಿದ ಪರಿಣಾಮ ಆತ ಸಾವನ್ನಪ್ಪಿದ ಘಟನೆ ನೋಯ್ಡಾದಲ್ಲಿ ನಡೆದಿದೆ.
ಬೆಳಗ್ಗಿನ ಜಾವ ಮನೆಯೊಂದರಲ್ಲಿ ಕಳ್ಳತನಕ್ಕೆ ಬಂದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಆತನ ಬಳಿಯಿದ್ದ ಮೊಬೈಲ್, ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ. ಬಳಿಕ ಆತನಿಗೆ ಚೆನ್ನಾಗಿ ಥಳಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತೀವ್ರ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸುವ ಮಧ‍್ಯದಲ್ಲೇ ಆತ ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.