Select Your Language

Notifications

webdunia
webdunia
webdunia
webdunia

ವ್ಯಕ್ತಿಯನ್ನು ಕೊಂದ ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಸೇಡು ತೀರಿಸಿಕೊಂಡ ಗ್ರಾಮಸ್ಥರು

ವ್ಯಕ್ತಿಯನ್ನು ಕೊಂದ ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಸೇಡು ತೀರಿಸಿಕೊಂಡ ಗ್ರಾಮಸ್ಥರು
ಲಕ್ನೋ , ಮಂಗಳವಾರ, 6 ನವೆಂಬರ್ 2018 (08:52 IST)
ಲಕ್ನೋ : 50 ವರ್ಷದ ವ್ಯಕ್ತಿಯನ್ನು ಕೊಂದು ಹಾಕಿದ ಹುಲಿಯ ಮೇಲೆ ಸೇಡು ತೀರಿಸಿಕೊಳ್ಳಲು ಗ್ರಾಮಸ್ಥರು ಅದರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ದುಧ್ವಾ ಹುಲಿ ಅಭಯಾರಣ್ಯ ಪ್ರದೇಶದಲ್ಲಿ ನಡೆದಿದೆ.

ಭಾನುವಾರದಂದು ಹುಲಿ 50 ವರ್ಷದ ವ್ಯಕ್ತಿಯ ಮೇಲೆ ದಾಳಿ ಮಾಡಿದೆ. ಆಗ ಹುಲಿ ಅಭಯಾರಣ್ಯದ ಸಿಬ್ಬಂದಿಗಳು  ಆತನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಕಾರ್ಯನಿರತರಾಗಿದ್ದ ವೇಳೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಸುತ್ತುವರಿದು ಆ ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದಿದ್ದಾರೆ.

 

ಅಭಯಾರಣ್ಯ ಪ್ರದೇಶದಲ್ಲಿ ಹುಲಿ ಹತ್ಯೆ ಮಾಡುವುದು ಗಂಭೀರ ಅಪರಾಧವಾಗಿದ್ದರಿಂದ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಹಾಗೇ ಹುಲಿಯನ್ನು ಹತ್ಯೆ ಮಾಡುವಲ್ಲಿ ಯಾರೆಲ್ಲಾ ಭಾಗಿಯಾದ್ದರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ದುಧ್ವಾ ಹುಲಿ ಅಭಯಾರಣ್ಯ ನಿರ್ದೇಶಕರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಗೆಳೆಯನ ಜೊತೆ ಕುಳಿತು ಮಾತನಾಡುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ