Select Your Language

Notifications

webdunia
webdunia
webdunia
webdunia

ಹಿಂಸಾಚಾರ : ಭಾರತೀಯರ ರಕ್ಷಣೆಗೆ ‘ಆಪರೇಷನ್ ಕಾವೇರಿ’

ಸುಡಾನ್
ನವದೆಹಲಿ : ಸುಡಾನ್ನ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ದೇಶದ ನಾಗರಿಕರನ್ನು ಸ್ಥಳಾಂತರಿಸಲು ಭಾರತ ಸರ್ಕಾರವು ಆಪರೇಷನ್ ಕಾವೇರಿ ಪ್ರಾರಂಭಿಸಿದೆ ಎಂದು ಕೇಂದ್ರ ಸಚಿವ ಎಸ್. ಶಂಕರ್ ತಿಳಿಸಿದರು.
 
ಈಗಾಗಲೇ ಸುಮಾರು 500 ಭಾರತೀಯರು ಸುಡಾನ್ನ ಬಂದರು ಬಳಿ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಆಪರೇಷನ್ ಕಾವೇರಿ ಎಂದು ಹೆಸರಿಡಲಾಗಿದೆ ಎಂದು ಟ್ವೀಟ್ನಲ್ಲಿ ಮಾಹಿತಿ ನೀಡಿದ್ದಾರೆ.

ಸುಡಾನ್ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ಆಪರೇಷನ್ ಕಾವೇರಿ ಪ್ರಾರಂಭಗೊಂಡಿದೆ. ಸುಮಾರು 500 ಭಾರತೀಯರು ಸುಡಾನ್ನ ಬಂದರು ಬಳಿ ತಲುಪಿದ್ದಾರೆ. ಈಗಾಗಲೇ ಅವರನ್ನು ಸುರಕ್ಷಿತವಾಗಿ ಕರೆತರಲು ನಮ್ಮ ದೇಶದ ಹಡುಗುಗಳು ಹಾಗೂ ವಿಮಾನಗಳು ಸಜ್ಜಾಗಿವೆ. ಸುಡಾನ್ನಲ್ಲಿರುವ ನಮ್ಮ ಎಲ್ಲ ಸಹೋದರರಿಗೆ ಸಹಾಯ ಮಾಡಲು ಬದ್ಧವಾಗಿದ್ದೇವೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಣದಲ್ಲಿರುವ ಬಂಡಾಯ ವೀರರು ಯಾರು?