Select Your Language

Notifications

webdunia
webdunia
webdunia
webdunia

ಸಂಪುಟ : ಜೊಲ್ಲೆ ಮಾಸ್ಟರ್ ಪ್ಲಾನ್ !

ಸಂಪುಟ : ಜೊಲ್ಲೆ ಮಾಸ್ಟರ್ ಪ್ಲಾನ್ !
ಮಂಗಳೂರು , ಬುಧವಾರ, 9 ಫೆಬ್ರವರಿ 2022 (06:24 IST)
ಮಂಗಳೂರು : ದೈವಸಂಕಲ್ಪ ಯೋಜನೆಯಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ನ ಪ್ರಾಸ್ತಾವಿತ ಕಾಮಗಾರಿಗಳನ್ನು ಅಂತಿಮಗೊಳಿಸಲಾಗಿದ್ದು,

ಶೀಘ್ರದಲ್ಲಿ ಸಚಿವ ಸಂಪುಟ ಸಭೆಯ ಮುಂದಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದರು.

ದೇವಾಲಯದ ಸಮಗ್ರ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಶಿಕಲಾ ಜೊಲ್ಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ 300 ಕೋಟಿ ರೂ.ಗಳ ಮೂರನೇ ಹಂತದ ಮಾಸ್ಟರ್ ಪ್ಲಾನ್ ಬಗ್ಗೆ ಪ್ರಸ್ತಾವಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 100 ಎಕರೆ ಪ್ರದೇಶದಲ್ಲಿ ಗೋಶಾಲೆಯನ್ನು ನಿರ್ಮಿಸುವ ಯೋಜನೆಗೆ ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟದ ಬಳಿ ಅರಣ್ಯಕ್ಕೆ ಸೇರಿದ ಪ್ರದೇಶದಲ್ಲಿ ಯಾವುದೇ ಮರಗಳನ್ನು ಕಡಿಯದೆ ಈ ಗೋಶಾಲೆಯನ್ನು ನಿರ್ಮಿಸಲಾಗುವುದು. ಈ ಬಗ್ಗೆ ವಿಸ್ಕøತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ .

ದೇವಸ್ಥಾನದ ಸುರಕ್ಷತೆಗಾಗಿ 60 ಹೋಮ್ ಗಾರ್ಡ್ಗಳನ್ನು ನಿಯಮಿತವಾಗಿ ನೇಮಕ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಬಗ್ಗೆ ಸಂಬಂಧಪಟ್ಟ ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಮತಿ ದೊರಕಿಸಿಕೊಡಲಾಗುವುದು ಎಂದು ಹೇಳಿದರು.

ಇಂದಿನ ಅವಶ್ಯಕತೆಗೆ ತಕ್ಕಂತೆ ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳುವುದು ಸರಿಯಲ್ಲ. ಮುಂದಿನ 35 ವರ್ಷಗಳ ನಂತರವೂ ಈ ಅಭಿವೃದ್ದಿ ಕಾರ್ಯ ಪ್ರಸ್ತುತವಾಗಿರಬೇಕು. ದೇವಸ್ಥಾನದ ಸುತ್ತಮುತ್ತಲಿರುವ ಹಸಿರನ್ನು ಕಾಪಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಎಂದು ತಿಳಿಸಿದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ಎಲಿಜಬೆತ್ ಕೊಹಿನೂರು ಯಾರ ಪಾಲು?