Publish Date: Sun, 04 Dec 2022 (12:05 IST)
Updated Date: Sun, 04 Dec 2022 (12:02 IST)
ದೆಹಲಿ : ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಎಎಪಿಗೆ ಮತ ಚಲಾಯಿಸಿ ಎಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ಇಂದು ದೆಹಲಿಯನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಮತದಾನ ನಡೆಯುತ್ತಿದೆ, ಪಾಲಿಕೆಯಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ಮಾಡಲು ಮತದಾನ ನಡೆಯುತ್ತಿದೆ.
ಪ್ರಾಮಾಣಿಕ ಮತ್ತು ದುಡಿಯುವ ಸರ್ಕಾರವನ್ನು ರಚಿಸಲು ಇಂದೇ ನಿಮ್ಮ ಮತ ಚಲಾಯಿಸಿ ಎಂದು ಜನತೆಯೊಂದಿಗೆ ಮನವಿ ಮಾಡಿಕೊಂಡಿದ್ದಾರೆ.
ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ಗಳಿಗೆ ಇಂದು ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾನವು ಬೆಳಗ್ಗೆ 8ರಿಂದ ಸಂಜೆ 5.30ರವರೆಗೆ ಮತದಾನ ನಡೆಯಲಿದೆ.
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ, ಆಮ್ ಆದ್ಮಿ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಗೆ ಏರ್ಪಟ್ಟಿದೆ.