Select Your Language

Notifications

webdunia
webdunia
webdunia
webdunia

ಗುಜರಾತ್ನಲ್ಲಿ ಡಿ.1, 5ಕ್ಕೆ ಎರಡು ಹಂತದಲ್ಲಿ ಮತದಾನ

ಗುಜರಾತ್ನಲ್ಲಿ ಡಿ.1, 5ಕ್ಕೆ ಎರಡು ಹಂತದಲ್ಲಿ ಮತದಾನ
ನವದೆಹಲಿ , ಗುರುವಾರ, 3 ನವೆಂಬರ್ 2022 (14:46 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಡಿಸೆಂಬರ್ 1 ರಂದು ಮೊದಲ ಹಂತ ಹಾಗೂ ಡಿಸೆಂಬರ್ 5ಕ್ಕೆ 2ನೇ ಹಂತದ ಮತದಾನ ನಡೆಯಲಿದೆ.
 
ಅಲ್ಲದೇ ಡಿಸೆಂಬರ್ 8ಕ್ಕೆ ಮತ ಎಣಿಕೆ ನಡೆಯಲಿದೆ. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳಲಿದೆ. ಗುಜರಾತ್ ವಿಧಾನಸಭೆಯಲ್ಲಿ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಎರಡು ಹಂತದಲ್ಲಿ ಮತದಾನ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಾತ್ರೆಗೆ ಬಿಬಿಎಂಪಿ ನೌಕರರು ಸಜ್ಜು