Webdunia - Bharat's app for daily news and videos

Install App

ಕೇಂದ್ರದಿಂದ ಜಡ್ಜ್ ಗಳಿಗೊಂದು ಭರ್ಜರಿ ಕೊಡುಗೆ; 200 ಪಟ್ಟು ಹೆಚ್ಚಾದ ವೇತನ

Webdunia
ಬುಧವಾರ, 31 ಜನವರಿ 2018 (07:31 IST)
ನವದೆಹಲಿ: ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಕೊಡುಗೆಯೊಂದು ಸಿಕ್ಕಿದೆ. ನ್ಯಾಯಾಂಗ ವ್ಯವಸ್ಥೆ ಬಿಕ್ಕಟ್ಟಿನಲ್ಲಿದೆ ಎಂಬ ಚರ್ಚೆ ನಡುವೆಯೇ ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳ ವೇತನವನ್ನು ಶೇಕಡ 200ರಷ್ಟು ಹೆಚ್ಚಳ ಮಾಡುವ ಮೂಲಕ  ನ್ಯಾಯಮೂರ್ತಿಗಳಿಗೆ ಒಂದೊಳ್ಳೆ ಕೊಡುಗೆ ನೀಡಿದೆ. ಜನವರಿ 27ರಂದು ಸರಕಾರ ಗೆಜೆಟ್‌ ಅಧಿಸೂಚನೆ ಹೊರಡಿಸಿದ್ದು, ಪರಿಷ್ಕೃತ ವೇತನ 2016ರ ಜನವರಿ 1ರಿಂದ ಅನ್ವಯವಾಗುವಂತೆ ಜಾರಿಯಾಗಲಿದೆ.


ಸುಪ್ರೀಂ ಕೋರ್ಟ್‌ ಹಾಗೂ 24 ಹೈಕೋರ್ಟ್‌ಗಳ ಹಾಲಿ ಹಾಗೂ ನಿವೃತ್ತ ನ್ಯಾಯಮೂರ್ತಿಗಳಿಗೆ ಪರಿಷ್ಕೃತ ವೇತನದ ಲಾಭಗಳು ಸಿಗಲಿವೆ. ಗೆಜೆಟ್‌ ಅಧಿಸೂಚನೆ ಪ್ರಕಾರ, ಸಿಜೆಐ ಅವರ ಹಾಲಿ ಮಾಸಿಕ ವೇತನ (ತುಟ್ಟಿಭತ್ಯೆ ಹಾಗೂ ಇತರೆ ಭತ್ಯೆಗಳು ಹೊರತುಪಡಿಸಿ) 1 ಲಕ್ಷ ರೂ. ಇದ್ದು, ಹೊಸ ನಿಯಮದ ಅನುಸಾರ ಅವರ ಸಂಬಳ 2.80 ಲಕ್ಷ ರೂ.ಗೆ ಏರಿಕೆಯಾಗಲಿದೆ. ಇದರ ಜತೆಗೆ ಅಧಿಕೃತ ನಿವಾಸ, ಕಾರು, ಸಿಬ್ಬಂದಿ ನಿರ್ವಹಣೆ ವೆಚ್ಚ ಹಾಗೂ ಇತರೆ ಭತ್ಯೆಗಳು ಹೆಚ್ಚುವರಿಯಾಗಿ ಸೇರಲಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments