ಭಾರತ - ಪಾಕಿಸ್ತಾನದ ನಡುವೆ ಯುದ್ಧವಾದರೆ ಎರಡು ದೇಶಗಳಲ್ಲಿರುವ ಪಂಜಾಬ್ ಪಾಂತ್ಯಗಳ ಪಾಲಿಗೆ ಒಳ್ಳೆಯದಲ್ಲ ಎಂದಿರುವ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಂಡು ಪರಿಸ್ಥಿತಿಯನ್ನು ತಿಳಿಗೊಳಿಸುವಂತೆ ಪಾಕಿಸ್ತಾನಕ್ಕೆ ಒತ್ತಾಯಿಸಿದ್ದಾರೆ.
ಸಂಗತ್ ದರ್ಶನ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನ್ನಾಡುತ್ತಿದ್ದ ಅವರು, ಸಿಂಧು ನದಿ ನೀರು ಒಪ್ಪಂದವನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಇನ್ನೊಂದು ಸವಾಲಿಗೆ ಉತ್ತರಿಸಿದ ಅವರು ಹೊಸ ರಾಜಕೀಯ ಶಕ್ತಿಗಳು ರಾಜ್ಯದಲ್ಲಿ ತಲೆ ಎತ್ತುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಯಾವುದೇ ಪ್ರಭಾವವನ್ನು ಬೀರಲಾರದು, ಎಸ್ಎಡಿ-ಬಿಜೆಪಿ ಇವುಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದರು.