Webdunia - Bharat's app for daily news and videos

Install App

ಯುದ್ಧ : ದೆಹಲಿಗೆ ಬಂದಿಳಿದ ರಷ್ಯಾ ಸೆರ್ಗೆ ಲಾವ್ರೊವ್

Webdunia
ಶುಕ್ರವಾರ, 1 ಏಪ್ರಿಲ್ 2022 (11:01 IST)
ನವದೆಹಲಿ : ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ಭಾರತಕ್ಕೆ ಆಗಮಿಸಿದ್ದಾರೆ.

ಕಳೆದ ತಿಂಗಳು ಉಕ್ರೇನ್ ಮೇಲೆ ರಷ್ಯಾ ಆಕ್ರಮಣವನ್ನು ಆರಂಭಿಸಿದ ನಂತರ ಇದು ಭಾರತಕ್ಕೆ ಅವರ ಮೊದಲ ಪ್ರವಾಸವಾಗಿದೆ.

ಅಧಿಕೃತ ಭೇಟಿಗಾಗಿ ನವದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಸ್ವಾಗತಿಸುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಲಾವ್ರೊವ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾರಿಯಾ ಜಖರೋವಾ ತಿಳಿಸಿತ್ತು.

ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೊರಡಿಸಿರುವ ಲಾವ್ರೊವ್ ಅವರ ಭೇಟಿಯ ಮಾಧ್ಯಮ ಪ್ರಕಟಣೆಯಲ್ಲಿ ರಷ್ಯಾದ ವಿದೇಶಾಂಗ ಸಚಿವರು ಮತ್ತು ಪ್ರಧಾನಿ ನಡುವಿನ ಯಾವುದೇ ಸಭೆಯನ್ನು ಉಲ್ಲೇಖಿಸಿಲ್ಲ ಎನ್ನಲಾಗಿದೆ.

ಮಾತುಕತೆಯ ಸಿದ್ಧತೆಗಳ ಬಗ್ಗೆ ತಿಳಿದಿರುವ ಮೂಲಗಳು, ರಷ್ಯಾದಿಂದ ವಿವಿಧ ಮಿಲಿಟರಿ ಯಂತ್ರಾಂಶಗಳು ಮತ್ತು S-400 ಕ್ಷಿಪಣಿ ವ್ಯವಸ್ಥೆಗಳ ಘಟಕಗಳನ್ನು ಸಮಯೋಚಿತವಾಗಿ ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ಭಾರತವು ಒತ್ತಡ ಹೇರುವ ಸಾಧ್ಯತೆಯಿದೆ ಎಂದು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments