ನವದೆಹಲಿ : ಲೋಕಸಭೆ ಚುನಾವಣೆಯ ಪ್ರಚಾರ ಪೋಸ್ಟರ್ ನಲ್ಲಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಅವರ ಭಾವಚಿತ್ರ ಬಳಸಿದ ಹಿನ್ನಲೆಯಲ್ಲಿ ದೆಹಲಿ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಶಾಸಕ ಓಂ ಪ್ರಕಾಶ್ ಶರ್ಮಾ ಅವರು ಬಿಜೆಪಿ ಪ್ರಚಾರ ಪೋಸ್ಟರ್ ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ವಿಂಗ್ ಕಮಾಂಡರ್ ಅವರ ಚಿತ್ರಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಅಷ್ಟೇ ಅಲ್ಲದೇ ಮೋದಿ ಅವರು ಅಭಿನಂದನ್ ಅವರನ್ನು ಅತ್ಯಲ್ಪ ಸಮಯದಲ್ಲಿ ಪಾಕ್ ನಿಂದ ಭಾರತಕ್ಕೆ ಕರೆತಂದದ್ದ, ಬಹುದೊಡ್ಡ ರಾಜತಾಂತ್ರಿಕ ಗೆಲುವು ಎಂದು ಬರೆದಿದ್ದರು. ಈ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾಗೆ ಶೋಕಾಸ್ ನೋಟಿಸ್ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.