Publish Date: Sun, 26 Dec 2021 (16:50 IST)
Updated Date: Sun, 26 Dec 2021 (19:53 IST)
ಗಾಂಧಿನಗರ : 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ 6 ಮಂದಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಇತ್ತೀಚೆಗಷ್ಟೇ ಬಾಲಕಿಯ ಸಂಬಂಧಿಕರು ಈ ವೀಡಿಯೋವನ್ನು ಕಂಡು ಗಾಬರಿಯಾಗಿದ್ದಾರೆ. ಈ ವೀಡಿಯೋವನ್ನು ಆರೋಪಿಯೊಬ್ಬ ತನ್ನ ಮೊಬೈಲ್ನಲ್ಲಿ ಸೆರೆಹಿಡಿದು ಸೋಶಿಯಲ್ ಮೀಡಿಯಾ ಫ್ಲಾಟ್ಫಾರ್ಮ್ನಲ್ಲಿ ಶೇರ್ ಮಾಡಿಕೊಂಡಿದ್ದಾನೆ.
ದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಅಹ್ವಾ ತಾಲೂಕಿನಲ್ಲಿ ಬಾಲಕಿಯ ಮೇಲೆ ಮೊದಲು ಆಕೆಯ ಸ್ನೇಹಿತ ಅತ್ಯಾಚಾರವೆಸಗಿದ್ದಾನೆ. ಬಳಿಕ ದಾರಿಯಲ್ಲಿ ಕಾಯುತ್ತಿದ್ದ ಆತನ ಎಂಟು ಮಂದಿ ಸ್ನೇಹಿತರು ಬಾಲಕಿಯನ್ನು ಬಲವಂತವಾಗಿ ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಎನ್. ಎಚ್ ಸವ್ಸೆತಾ ತಿಳಿಸಿದ್ದಾರೆ.
ಅತ್ಯಾಚಾರ ವೆಸಗಿದ ಬಳಿಕ ಬಾಲಕಿಗೆ ಈ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದಾರೆ. ಇದರಿಂದ ಭಯಗೊಂಡ ಬಾಲಕಿ ಸುಮಾರು ಎರಡು ತಿಂಗಳು ಮೌನವಾಗಿದ್ದಳು.
ಇತ್ತೀಚೆಗಷ್ಟೇ ಆಕೆಯ ಸಂಬಂಧಿಕರೊಬ್ಬರು ಈ ವೀಡಿಯೋ ನೋಡಿ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.