Publish Date: Tue, 09 Oct 2018 (09:18 IST)
Updated Date: Tue, 09 Oct 2018 (09:20 IST)
ನವದೆಹಲಿ: ತನಗೆ ಮತ್ತು ಗೆಳೆಯನಿಗೆ ಸೆಕ್ಸ್ ಸುಖ ನೀಡಲು ನಿರಾಕರಿಸಿದ್ದಕ್ಕೆ ಗಾಝಿಯಾಬಾದ್ ನಲ್ಲಿ ಸೆಕ್ಯುರಿಟಿ ಗಾರ್ಡ್ ಒಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಪೊಲೀಸರು ಈತನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಸತ್ಯ ಸಂಗತಿ ಬಾಯ್ಬಿಟ್ಟಿದ್ದಾನೆ. ಲೈಂಗಿಕ ಸುಖ ನೀಡಲು ನಿರಾಕರಿಸಿದ್ದಕ್ಕೆ ತಾನು ಸ್ನೇಹಿತನ ಸಹಾಯದಿಂದ ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಆತ ಬಾಯ್ಬಿಟ್ಟಿದ್ದಾನೆ
ಅಕ್ಟೋಬರ್ 6 ರಂದು ಈತ ಕಾವಲು ಕಾಯುತ್ತಿದ್ದ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮನೆಯ ಮಾಲಿಕ ಅಲ್ಲಿ ವಾಸಿಸುತ್ತಿರಲಿಲ್ಲ. ಆರೋಪಿಯೇ ಆ ಮನೆಯನ್ನು ನೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.