Select Your Language

Notifications

webdunia
webdunia
webdunia
webdunia

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

Operation Sindura, Prime Minister Narendra Modi, India-Pakistan conflict

Sampriya

ನವದೆಹಲಿ , ಸೋಮವಾರ, 12 ಮೇ 2025 (20:54 IST)
Photo Credit X
ನವದೆಹಲಿ: ಭಾರತ ಯಾವುದೇ ರೀತಿಯ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ. ಭಾರತದ ಸರ್ಜಿಕಲ್ ದಾಳಿಗಳು ಪಾಕಿಸ್ತಾನದ ಯುದ್ಧ ಸಿದ್ಧತೆಗಳನ್ನು ಛಿದ್ರಗೊಳಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪಾಕಿಸ್ತಾನದ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೆಲ್‌ಗೆ ಭಾರತ ಬೆದರುವುದಿಲ್ಲ ಎಂದು ದೇಶವನ್ನು ಉದ್ದೇಶಿಸಿ ನಡೆಸಿದ ಭಾಷಣದಲ್ಲಿ ಪುನರುಚ್ಚರಿಸಿದರು.

ನಾವು ಮೊದಲು ಅಣ್ವಸ್ತ್ರ ಬಳಕೆ ಮಾಡುವುದಿಲ್ಲ. ಆದರೆ ನಮ್ಮ ಮೇಲೆ ದಾಳಿ ನಡೆಸಿದರೆ ನಾವು ಅಣ್ವಸ್ತ್ರ ಬಳಕೆಗೆ ಹಿಂಜರಿಕೆ ಮಾಡುವುದಿಲ್ಲ ಎಂಬ ನೀತಿಯನ್ನು ಭಾರತ ಅಳವಡಿಸಿಕೊಂಡಿದೆ.

ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಯಿತು. ಆದರೆ, ಭಾರತದ ಸೇನೆ ಬಹಾವಲ್ಪುರ್ ಮತ್ತು ಮುರಿಡ್ಕೆಯಲ್ಲಿನ ಭಯೋತ್ಪಾದಕ ಕೇಂದ್ರಗಳನ್ನು ನಾಶಮಾಡುವ ಮೂಲಕ ಅವರ ಹೃದಯವನ್ನು ಹೊಡೆದು ಹಾಕಿತು ಎಂದರು.

ಭಾರತ ನಮ್ಮ ಮೇಲೆ ದಾಳಿ ನಡೆಸಿದರೆ ನಾವು ಪರಮಾಣು ಅಸ್ತ್ರ ಬಳಕೆ ಮಾಡುತ್ತೇವೆ ಎಂದು ಪಾಕಿಸ್ತಾನ ಎಚ್ಚರಿಕೆ ನೀಡುತ್ತಿತ್ತು. ನಿಮ್ಮ ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ. ನಾವು ಯಾವ ರೀತಿ ಪ್ರತಿಕ್ರಿಯೆ ನೀಡಬೇಕೋ ನಾವು ಅದೇ ರೀತಿಯ ಪ್ರತಿಕ್ರಿಯೆ ನೀಡುತ್ತೇವೆ ಎಂದು ಎಚ್ಚರಿಸಿದರು.

ಆಪರೇಷನ್‌ ಸಿಂಧೂರದ ಮೂಲಕ ದೇಶದ ಸಾಮರ್ಥ್ಯ ವಿಶ್ವಕ್ಕೆ ಗೊತ್ತಾಗಿದೆ. ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣರಾದ ನಮ್ಮ ಸೈನಿಕರಿಗೆ ಸೆಲ್ಯೂಟ್‌ ಹೊಡೆಯುತ್ತೇನೆ ಎಂದು ಮೋದಿ ಪ್ರಶಂಸಿದ್ದಾರೆ.

ಆಪರೇಷನ್ ಸಿಂಧೂರ ಕೇವಲ ಹೆಸರಲ್ಲ. ಇದು ದೇಶದ ಲಕ್ಷಾಂತರ ಜನರ ಭಾವನೆಗಳ ಪ್ರತಿಬಿಂಬವಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳ ಮೇಲೆ ದಾಳಿ ಮಾಡಿದವು. ಭಾರತ ಇಷ್ಟೊಂದು ದೊಡ್ಡ ಹೆಜ್ಜೆಗಳನ್ನು ಇಡುತ್ತದೆ ಎಂದು ಭಯೋತ್ಪಾದಕರು ಕನಸು ಕಂಡಿರಲಿಲ್ಲ.ಭಾರತೀಯ ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಪಾಕಿಸ್ತಾನದಲ್ಲಿರುವ ಆ ತಾಣಗಳ ಮೇಲೆ ದಾಳಿ ಮಾಡಿದಾಗ, ಅದು ಭಯೋತ್ಪಾದಕರ ಕಟ್ಟಡಗಳ ಮೇಲೆ ಮಾತ್ರವಲ್ಲ, ಅವರ ಧೈರ್ಯವನ್ನು ಪುಡಿಪುಡಿ ಮಾಡಲಾಯಿತು ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ