ನವದೆಹಲಿ : ಸಿಎಂ ಕುರ್ಚಿ ಕದನ ಕೊನೆಗೂ ಅಂತ್ಯ ಕಂಡಿದೆ. ತಾವೇ ಸಿಎಂ ಆಗಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಕೊನೆಗೂ ಸಿದ್ದರಾಮಯ್ಯ ಅವರಿಗೆ ಸ್ಥಾನ ಬಿಟ್ಟು ಕೊಟ್ಟು ಡಿಸಿಎಂ ಆಗಲು ಒಪ್ಪಿಗೆ ನೀಡಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗುತ್ತದೆ ಎಂದು ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದಾರೆ.