ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದಲ್ಲದೇ ದಲಿತರು ಮತ್ತು ಮುಸ್ಲಿಮರು ಬಗ್ಗೆ ನಿರ್ಲಕ್ಷ್ಯ ಮನೋಭಾವನೆ ತಳೆದಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಒಂದು ವೇಳೆ ಯೋಗಿ ಆದಿತ್ಯನಾಥ್ ತಾವು ಮಾಡುವುದೆಲ್ಲ ಸರಿ. ತಮಗೆ ಎಲ್ಲಾ ಗೊತ್ತಿದೆ ಎಂದು ಭಾವಿಸಿದಲ್ಲಿ ಅದು ತಪ್ಪು. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಡುತ್ತಾ ಸಾಗಿದೆ. ದಲಿತರು ಮತ್ತು ಅಲ್ಪಸಂಖ್ಯಾತ ಅಭಿವೃದ್ಧಿಯ ಬಗ್ಗೆ ಸರಕಾರ ತುಂಬಾ ಉದಾಸೀನತೆ ತೋರಿದೆ ಎಂದು ಕಿಡಿಕಾರಿದ್ದಾರೆ.
ದೇಶದಲ್ಲಿಯೇ ಉತ್ತರಪ್ರದೇಶ ದೊಡ್ಡ ರಾಜ್ಯವಾಗಿದ್ದರಿಂದ ಅಲ್ಲಿನ ಪರಿಸ್ಥಿತಿಯ ಬಗ್ಗೆ ದೇಶದ ಇತರ ಭಾಗಗಳ ಮೇಲೆ ಪ್ರಭಾವ ಬೀರುತ್ತದೆ. ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಕೇವಲ ಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಖರ್ಗೆಯವರಂತೆ ಅಸಮಾಧಾನ ವ್ಯಕ್ತಪಡಿಸಿದ ಮತ್ತೊಬ್ಬ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕೋಮುಗಲಭೆಗಳು ಮತ್ತು ಲೈಂಗಿಕ ಕಿರುಕುಳಗಳು ನಡೆದಿರಲಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.