Webdunia - Bharat's app for daily news and videos

Install App

ಅಡಳಿತ ನಿರ್ವಹಣೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ವಿಫಲ: ಖರ್ಗೆ

Webdunia
ಬುಧವಾರ, 31 ಮೇ 2017 (19:01 IST)
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದಲ್ಲದೇ ದಲಿತರು ಮತ್ತು ಮುಸ್ಲಿಮರು ಬಗ್ಗೆ ನಿರ್ಲಕ್ಷ್ಯ ಮನೋಭಾವನೆ ತಳೆದಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. 
 
ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಒಂದು ವೇಳೆ ಯೋಗಿ ಆದಿತ್ಯನಾಥ್ ತಾವು ಮಾಡುವುದೆಲ್ಲ ಸರಿ. ತಮಗೆ ಎಲ್ಲಾ ಗೊತ್ತಿದೆ ಎಂದು ಭಾವಿಸಿದಲ್ಲಿ ಅದು ತಪ್ಪು. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಡುತ್ತಾ ಸಾಗಿದೆ. ದಲಿತರು ಮತ್ತು ಅಲ್ಪಸಂಖ್ಯಾತ ಅಭಿವೃದ್ಧಿಯ ಬಗ್ಗೆ ಸರಕಾರ ತುಂಬಾ ಉದಾಸೀನತೆ ತೋರಿದೆ ಎಂದು ಕಿಡಿಕಾರಿದ್ದಾರೆ. 
 
ದೇಶದಲ್ಲಿಯೇ ಉತ್ತರಪ್ರದೇಶ ದೊಡ್ಡ ರಾಜ್ಯವಾಗಿದ್ದರಿಂದ ಅಲ್ಲಿನ ಪರಿಸ್ಥಿತಿಯ ಬಗ್ಗೆ ದೇಶದ ಇತರ ಭಾಗಗಳ ಮೇಲೆ ಪ್ರಭಾವ ಬೀರುತ್ತದೆ. ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಕೇವಲ ಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. 
 
ಖರ್ಗೆಯವರಂತೆ ಅಸಮಾಧಾನ ವ್ಯಕ್ತಪಡಿಸಿದ ಮತ್ತೊಬ್ಬ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕೋಮುಗಲಭೆಗಳು ಮತ್ತು ಲೈಂಗಿಕ ಕಿರುಕುಳಗಳು ನಡೆದಿರಲಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಪಿ ಯೋಗೇಶ್ವರ್ ಫ್ಯಾಮಿಲಿ ಮ್ಯಾಟರ್: ರಣದೀಪ್ ಸುರ್ಜೇವಾಲಗೆ ದೂರು ಕೊಟ್ಟ ಪತ್ನಿ

ರಾಜಸ್ಥಾನದ ಚುರುವಿನಲ್ಲಿ ವಾಯುಪಡೆಯ ಜಾಗ್ವಾರ್ ಫೈಟರ್ ಪತನ: ಪೈಲಟ್ ಸಾವು

ಗುಜರಾತ್‌: ಸೇತುವೆ ಮುರಿದು ನದಿಗೆ ಬಿದ್ದ ವಾಹನಗಳು, 9ಮಂದಿ ಸಾವು

ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನಮ್ಮ ಪಕ್ಷದ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಬಿಕೆ ಹರಿಪ್ರಸಾದ್ ಗೆ ಟಾಂಗ್ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ