Webdunia - Bharat's app for daily news and videos

Install App

ಎಸ್.ಎಂ.ಕೃಷ್ಣರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳಲಾಗುವುದು: ಅಮಿತ್ ಶಾ

Webdunia
ಬುಧವಾರ, 22 ಮಾರ್ಚ್ 2017 (18:16 IST)
ಹಿರಿಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಿರುವುದು ಸಂತಸದ ಸಂಗತಿಯಾಗಿದೆ. ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
 
ಕೃಷ್ಣ ಸುದೀರ್ಘ ರಾಜಕೀಯ ಜೀವನದಲ್ಲಿದ್ದವರು. ಇದೊಂದು ಬದಲಾವಣೆಯ ಪರ್ವವಾಗಿರುವುದರಿಂದ ಸಮಯೋಚಿತ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶ್ಲಾಘಿಸಿದರು.
 
ಕಳೆದ ಮೂರು-ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ದೇಶದಲ್ಲಿ ಪರಿವರ್ತನೆಯ ಕಾಲ ಆರಂಭವಾಗಿದೆ. ಎಸ್‌ಎಂಕೃಷ್ಣ ರಾಜಕೀಯ ಆಸ್ತಿಯಿದ್ದಂತೆ. ಅವರು ಬೇರೇ ಬೇರೆ ಹುದ್ದೆಗಳನ್ನು ನಿಭಾಯಿಸಿ ಅನುಭವ ಹೊಂದಿದ್ದಾರೆ ಎಂದರು.
 
ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಕೃಷ್ಣ ಅವರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳುವುದರ ಜೊತೆಗೆ ಅವರ ಅನುಭವಗಳನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 
 
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದಗೌಡ ಮತ್ತು ರಾಜ್ಯದ ಉಸ್ತುವಾರಿ ಹೊತ್ತಿರುವ ಮರುಳಿಧರ್ ರಾವ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments