Select Your Language

Notifications

webdunia
webdunia
webdunia
webdunia

ರಾಹುಲ್ ಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುತ್ತೇವೆ : ಕೈ ನಾಯಕ

ರಾಹುಲ್ ಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುತ್ತೇವೆ : ಕೈ ನಾಯಕ
ಚೆನ್ನೈ , ಶನಿವಾರ, 8 ಏಪ್ರಿಲ್ 2023 (12:05 IST)
ಚೆನ್ನೈ : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿಗೆ 2 ವರ್ಷದ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ಮುಖಂಡರೊಬ್ಬರು ನಾಲಿಗೆ ಹರಿಬಿಟ್ಟಿದ್ದಾರೆ.

2019ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ʻಮೋದಿʼ ಉಪನಾಮ ಬಳಸಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಜಿಲ್ಲಾ ನ್ಯಾಯಾಲಯ ರಾಹುಲ್ ಅವರನ್ನು ದೋಷಿ ಪರಿಗಣಿಸಿ 2 ವರ್ಷ ಜೈಲುಶಿಕ್ಷೆ ವಿಧಿಸಿತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ರಾಹುಲ್ ಗಾಂಧಿ ಅವರ ಅನರ್ಹತೆ ಪ್ರಶ್ನಿಸಿ ತಮಿಳುನಾಡಿನ ದಿಂಡಿಗಲ್ನಲ್ಲಿ ಕಾಂಗ್ರೆಸ್ನ ಎಸ್ಸಿ-ಎಸ್ಟಿ ವಿಭಾಗದಿಂದ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಮುಖ್ಯಸ್ಥ ಮಣಿಕಂದನ್ ಮಾತನಾಡುವಾಗ ನಾಲಿಗೆ ಹರಿಬಿಟ್ಟಿದ್ದಾರೆ.

ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ ನ್ಯಾಯಾಧೀಶರಾದ ಹೆಚ್.ವರ್ಮಾ ಅವರ ನಾಲಿಗೆ ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟ್ವಿಟ್ಟರ್ನಲ್ಲಿ ನಾಯಿ ಹೋಯ್ತು, ಮತ್ತೆ ನೀಲಿ ಹಕ್ಕಿ ಬಂತು