Select Your Language

Notifications

webdunia
webdunia
webdunia
webdunia

ಕೇರಳಕ್ಕೆ ಯಾವುದು ಕಡಿಮೆಯಾಗದಂತೆ ನೋಡಿಕೊಳ್ಳುತ್ತೇವೆ: ವಯನಾಡು ಭೇಟಿಯಲ್ಲಿ ಪ್ರಧಾನಿ ಮೋದಿ ಭರವಸೆ

ಕೇರಳಕ್ಕೆ ಯಾವುದು ಕಡಿಮೆಯಾಗದಂತೆ ನೋಡಿಕೊಳ್ಳುತ್ತೇವೆ: ವಯನಾಡು ಭೇಟಿಯಲ್ಲಿ ಪ್ರಧಾನಿ ಮೋದಿ ಭರವಸೆ

Sampriya

ವಯನಾಡ್ , ಶನಿವಾರ, 10 ಆಗಸ್ಟ್ 2024 (19:13 IST)
Photo Courtesy X
ವಯನಾಡ್: ಭೀಕರ ಭೂಕುಸಿತಕ್ಕೆ ತತ್ತರಿಸಿಹೋಗಿರುವ ಕೇರಳಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತದೆ. ಕೆಲಸಕ್ಕೆ ಯಾವುದೇ ತೊಂದರೆಯಾಗದಂತೆ ನೆರವು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

ಭೂಕುಸಿತಕ್ಕೆ ಒಳಗಾದ  ಪ್ರದೇಶಗಳ ವೈಮಾನಿಕ ಸಮೀಕ್ಷೆ ಮತ್ತು ಭೇಟಿ ನಂತರ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ರಾಜ್ಯ ಸರ್ಕಾರದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಹೇಳಿದರು. ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ಸಂದರ್ಭದ ಬಗ್ಗೆ ಮಾಹಿತಿ ನೀಡಿದ ಕೂಡಲೇ ರಾಜ್ಯ ಸಚಿವರೊಬ್ಬರನ್ನು ರಾಜ್ಯಕ್ಕೆ ಕಳುಹಿಸಿ ಪರಿಸ್ಥಿತಿ ಅವಲೋಕಿಸಲಾಯಿತು ಎಂದು ಅವರು ಹೇಳಿದರು.

ಎನ್‌ಡಿಆರ್‌ಎಫ್, ಸೇನೆ ಮತ್ತು ವಾಯುಪಡೆಯ ತಂಡಗಳನ್ನು ಸಹ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.

"ಮೃತರ ಕುಟುಂಬಗಳಿಗೆ ಅವರು ಒಬ್ಬಂಟಿಯಾಗಿಲ್ಲ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ. ನಾವೆಲ್ಲರೂ ಅವರೊಂದಿಗೆ ನಿಂತಿದ್ದೇವೆ. ಕೇಂದ್ರ ಸರ್ಕಾರವು ಕೇರಳ ಸರ್ಕಾರದ ಜೊತೆ ನಿಂತಿದೆ ಮತ್ತು ಹಣದ ಕೊರತೆಯಿಂದ ಯಾವುದೇ ಕೆಲಸಕ್ಕೆ ಅಡ್ಡಿಯಾಗದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ" ಎಂದು ಅವರು ಹೇಳಿದರು.

ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ಮತ್ತು ಪರಿಹಾರ ಶಿಬಿರದಲ್ಲಿ ಬದುಕುಳಿದವರನ್ನು ಭೇಟಿಯಾದಾಗ ಅವರ ಹೃದಯ ಭಾರವಾಯಿತು ಎಂದು ಪ್ರಧಾನಿ ಹೇಳಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯನವರೇ ಲೂಟಿ ಒಪ್ಪಿಕೊಂಡು ರಾಜೀನಾಮೆ ಕೊಡಿ: ವಿಜಯೇಂದ್ರ