Publish Date: Sat, 10 Sep 2016 (15:09 IST)
Updated Date: Sat, 10 Sep 2016 (15:12 IST)
ದೇಶದ ಎಲ್ಲಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡುವುದೇ ಕೇಂದ್ರ ಸರಕಾರದ ಮೂಲ ಗುರಿ. ಅಗತ್ಯವೆನಿಸಿದಾಗ ಕಾವೇರಿ ವಿಷಯದಲ್ಲಿ ಮಧ್ಯ ಪ್ರವೇಶಿಸುತ್ತೇವೆ ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವೆ ಉಮಾ ಭಾರತಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಕಾವೇರಿ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಅಗತ್ಯವೆನಿಸಿದಾಗ ಕೇಂದ್ರ ಸರಕಾರ ಖಂಡಿತವಾಗಿಯೂ ಮಧ್ಯಪ್ರವೇಶಿಸುತ್ತದೆ ಎಂದು ಭರವಸೆ ನೀಡಿದ್ದಾರೆ.
ಪ್ರಧಾನಮಂತ್ರಿ ಮೋದಿಯವರು ಕೂಡಾ ಶೀಘ್ರದಲ್ಲಿಯೇ ರಾಷ್ಟ್ರೀಯ ಜಲ ನೀತಿಯನ್ನು ಜಾರಿಗೆ ತರಬೇಕು ಎಂದು ಬಯಸಿದ್ದಾರೆ. ಒಂದು ವೇಳೆ, ರಾಷ್ಟ್ರೀಯ ಜಲ ನೀತಿ ಜಾರಿಯಾದಲ್ಲಿ ರಾಜ್ಯಗಳ ಪರಸ್ಪರ ಸೌಹಾರ್ದತೆ ಹೆಚ್ಚುತ್ತದೆ ಎಂದು ತಿಳಿಸಿದ್ದಾರೆ.
ಮಹಾದಾಯಿ ವಿಷಯದಲ್ಲಿ ಮಹಾರಾಷ್ಟ್ರ, ಗೋವಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಸಲಹೆ ನೀಡಲಾಗಿದೆ. ಮಾತುಕತೆಯಿಂದ ಮಾತ್ರ ವಿವಾದ ಬಗೆಹರಿಯಲು ಸಾಧ್ಯ ಎಂದು ಕೇಂದ್ರ ಜಲ ಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ