Webdunia - Bharat's app for daily news and videos

Install App

ಜೆಎನ್‌ಯು ಆವರಣದಲ್ಲಿ ಶಸ್ತ್ರಾಸ್ತ್ರ ಬ್ಯಾಗ್ ಪತ್ತೆ

Webdunia
ಸೋಮವಾರ, 7 ನವೆಂಬರ್ 2016 (11:20 IST)
ಜೆಎನ್‌ಯು ವಿಶ್ವವಿದ್ಯಾಲಯ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ವಿದ್ಯಾರ್ಥಿಯೊಬ್ಬನ ನಾಪತ್ತೆ ಪ್ರಕರಣದಿಂದಾಗಿ ಸದ್ಯ ಸುದ್ದಿಯಲ್ಲಿರುವ ವಿಶ್ವವಿದ್ಯಾಲಯದಲ್ಲೀಗ ಶಸ್ತ್ರಾಸ್ತ್ರ ತುಂಬಿದ ಬ್ಯಾಗ್ ಪತ್ತೆಯಾಗಿದೆ.
ಜೆಎನ್‌ಯುವಿನ ಉತ್ತರ ಭಾಗದಲ್ಲಿನ ಗೇಟ್ ಬಳಿ ಶಸ್ತ್ರಾಸ್ತ್ರ ತುಂಬಿದ ಬ್ಯಾಗೊಂದು ಪತ್ತೆಯಾಗಿದ್ದು ಪೊಲೀಸರು ಅದನ್ನು ಜಫ್ತಿ ಮಾಡಿಕೊಂಡಿದ್ದಾರೆ. ಅದರಲ್ಲಿ 2 ನಾಡಪಿಸ್ತೂಲ್, 7 ಕಾಟ್ರೇಜ್, ಪಿಸ್ತೂಲ್, ಗುಂಡುಗಳು ಕಂಡು ಬಂದಿದ್ದು ಇದನ್ನು ಯಾರು ತಂದರು, ತಂದಿರುವ ಉದ್ದೇಶವೇನು, ಯಾವಾಗ ಇಟ್ಟರು, ಯಾರನ್ನಾದರೂ ಸಾಯಿಸುವ ಉದ್ದೇಶದಿಂದ ತರಲಾಯ್ತೇ ಎಂಬುದು ಪೊಲೀಸ್ ತನಿಖೆಯ ಬಳಿಕವಷ್ಟೇ ಗೊತ್ತಾಗಲಿದೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯಿದೆಯಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಪ್ರಗತಿಯಲ್ಲಿದೆ
 
ಕೆಲದಿನಗಳ ಹಿಂದೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಿಗೂಢವಾಗಿ ನಾಪತ್ತೆಯಾಗಿದ್ದು, ಆತ ಹೇಗಿದ್ದಾನೆ, ಬದುಕಿದ್ದಾನೋ ಇಲ್ಲವೋ ಎಂಬುದು ಪೊಲೀಸರು, ವಿಶ್ವವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ಯಾರಿಗೂ ಗೊತ್ತಿಲ್ಲ. ಆತನ ಪತ್ತೆಗೆ ಒತ್ತಾಯಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು ಈ ಮಧ್ಯೆ ಈ ಘಟನೆ ನಡೆದಿದ್ದು ಹಲವು ಅನುಮಾನಗಳಿಗೆ ಪುಷ್ಠಿ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments