Publish Date: Fri, 20 Mar 2026 (18:06 IST)
Updated Date: Fri, 20 Mar 2026 (18:08 IST)
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಹೇಳಿದ್ದಾರೆ.
ಸಹಾಯ ಮತ್ತು ವಾಪಸಾತಿಗಾಗಿ ಭಾರತೀಯ ಮಿಷನ್‌ಗಳು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿವೆ. ಅಂತರ ಸಚಿವಾಲಯದ ಬ್ರೀಫಿಂಗ್ ಅನ್ನು ಉದ್ದೇಶಿಸಿ ಮಾತನಾಡಿದ ಎಂಇಎ ಹೆಚ್ಚುವರಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಆರ್ ಮಹಾಜನ್, ನಾಪತ್ತೆಯಾದ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ಮೃತರನ್ನು ಭಾರತಕ್ಕೆ ಹಿಂದಿರುಗಿಸಲು ಹಲವಾರು ದೇಶಗಳಲ್ಲಿನ ಭಾರತೀಯ ಮಿಷನ್‌ಗಳು ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.
ಕಾಣೆಯಾದ ಭಾರತೀಯ ಪ್ರಜೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಮೃತ ಭಾರತೀಯ ಪ್ರಜೆಗಳ ಮೃತ ದೇಹಗಳನ್ನು ಭಾರತಕ್ಕೆ ಹಿಂದಿರುಗಿಸಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆದಿದೆ ಎಂದು ಹೇಲಿದರು.
ಗಲ್ಫ್ ಪ್ರದೇಶದಿಂದ ಪ್ರಯಾಣದ ಪರಿಸ್ಥಿತಿಯು ಕ್ರಮೇಣ ಸುಧಾರಿಸುತ್ತಿದೆ, ಗಮನಾರ್ಹ ಸಂಖ್ಯೆಯ ಪ್ರಯಾಣಿಕರು ಈಗಾಗಲೇ ಭಾರತಕ್ಕೆ ಮರಳುತ್ತಿದ್ದಾರೆ ಎಂದು ಅವರು ಹೇಳಿದರು.