Publish Date: Wed, 08 Jul 2026 (12:38 IST)
Updated Date: Wed, 08 Jul 2026 (12:40 IST)
ಕೋಲ್ಕತ್ತಾ: ಪಶ್ಚಿಮ ಬಂಗಾಲದ ಬರುಯಿಪುರ್ ನ 11 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.
ಈ ಪ್ರಕರಣ ದೇಶದಾದ್ಯಂತ ಆಕ್ರೋಶಕ್ಕೆ ಗುರಿಯಾಗಿತ್ತು. ರಾಜಸ್ತಾನ್ ನ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ನಡುವೆಯೇ ಪಶ್ಚಿಮ ಬಂಗಾಲದ 11 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು.
ಕಳೆದ ಶನಿವಾರ ರಾತ್ರಿ ಸೂರ್ಯಪುರದ ಕಾಡು-ಮೇಡಿನ ನಿರ್ಜನ ಸ್ಥಳಕ್ಕೆ ಬಾಲಕಿಯನ್ನು ಕರೆದೊಯ್ದು ಕಾಮುಕರು ಅತ್ಯಾಚಾರ ನಡೆಸಿದ್ದಲ್ಲದೆ ಕ್ರೂರವಾಗಿ ಹತ್ಯೆ ಮಾಡಿದ್ದರು. ಬಳಿಕ ಬಾಲಕಿಯ ಶವ ಬರುಯಿಪುರದ ಕೊಳವೊಂದರಲ್ಲಿ ಪತ್ತೆಯಾಗಿತ್ತು.
ಪ್ರಕರಣದಲ್ಲಿ ಪ್ರಮುಖ ಆರೋಪಿ ಆನಂದ್ ಸರ್ದಾರ್ ಮತ್ತು ಆತನ ಕೆಲವು ಸಹಚರರು ಭಾಗಿಯಾಗಿದ್ದರು. ಆತನ ಸಹಚರರ ಪೈಕಿ ಪ್ರಭಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈತನೇ ಬಾಲಕಿಯ ಶವ ಎಲ್ಲಿದೆ ಎಂದು ಪೊಲೀಸರಿಗೆ ತೋರಿಸಿದ್ದ.
ಇದೀಗ ಆತನನ್ನು ಸ್ಥಳ ಮಹಜರಿಗೆ ಕರೆದುಕೊಂಡು ಬಂದಿದ್ದಾಗ ಕತ್ತಲಿನ ವಾತಾವರಣದಲ್ಲಿ ಪೊಲೀಸರಿಂದ ಗನ್ ಕಿತ್ತುಕೊಂಡು ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದು ಆತ ಸಾವನ್ನಪ್ಪಿದ್ದಾನೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ