Select Your Language

Notifications

webdunia
webdunia
webdunia
webdunia

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಲೈವ್: ಕ್ಷಣ ಕ್ಷಣದ ಸುದ್ದಿಗಳಿಗಾಗಿ ಕ್ಲಿಕ್ಕಿಸಿ

West bengal assembly election results 2016
ಕೋಲ್ಕತಾ , ಗುರುವಾರ, 19 ಮೇ 2016 (07:58 IST)
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಏಣಿಕೆ ಆರಂಭವಾಗಿದೆ. ರಾಜಕೀಯ ಪಕ್ಷಗಳ ಬಲಾಬಲ ಇಂತಿದೆ.
 ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಬಿಜೆಪಿ, ಸಿಪಿಎಂ ಮತ್ತು ಇತರೆ ಪಕ್ಷಗಳು ಕಣದಲ್ಲಿದ್ದು, ಒಟ್ಟು 294 ಕ್ಷೇತ್ರಗಳ ಚುನಾವಣೆಯ ಮತಎಣಿಕೆ ನಡೆಯಲಿದೆ.

ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸಾರಥ್ಯದಲ್ಲಿ ಟಿಎಂಸಿ ಪಕ್ಷದ ಆಳ್ವಿಕೆಯಿದೆ. ಮಮತಾ ಬ್ಯಾನರ್ಜಿಯ ಟಿಎಂಸಿ ಪುನಃ ಅಧಿಕಾರದ ಗದ್ದುಗೆಗೆ ಏರುತ್ತದೆಂದು ಈಗಾಗಲೇ ಚುನಾವಣೆ ಸಮೀಕ್ಷೆಗಳು ಬಹಿರಂಗಮಾಡಿವೆ.
 
2. ಈಗಾಗಲೇ ಮತಎಣಿಕೆ ಆರಂಭವಾಗಿದ್ದು ಟಿಎಂಸಿ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸಿಪಿಎಂ ಮೈತ್ರಿಕೂಟ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 

3.  ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುನ್ನಡೆ 21 ಸ್ಥಾನಗಳಿಗೆ ಏರಿದ್ದು, ಸಿಪಿಎಂ 14 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಕೇವಲ ಒಂದು ಪಕ್ಷದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. 

4. ಪಶ್ಚಿಮ ಬಂಗಾಳದಲ್ಲಿ ಮತಎಣಿಕೆ ಬಿರುಸಿನಿಂದ ನಡೆದಿದ್ದು, ಟಿಎಂಸಿ 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಸಿಪಿಎಂ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.  ಬಿಜೆಪಿ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರೆ ಪಕ್ಷಗಳು ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. 

5. ಪಶ್ಚಿಮ ಬಂಗಾಳ ಮತ್ತೆ ಮಮತಾ ಬ್ಯಾನರ್ಜಿ ಆಳ್ವಿಕೆಗೆ ಜಾರುವ ಲಕ್ಷಣಗಳು ಕಂಡುಬಂದಿದ್ದು, ಟಿಎಂಸಿ ಪಕ್ಷವು 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಸಿಪಿಎಂ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಮತ್ತು ಇತರೆ ಪಕ್ಷಗಳು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. 

6. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸ್ಪಷ್ಟ ಬಹುಮತದತ್ತ ಸಾಗಿದ್ದು, ಟಿಎಂಸಿ 146 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಸಿಪಿಎಂ ಮೈತ್ರಿಕೂಟ 78 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 4 ಮತ್ತು ಇತರೆ ಪಕ್ಷಗಳು ತಲಾ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.

7. ಸಿಪಿಎಂ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡಿರುವುದು ವ್ಯರ್ಥ ಪ್ರಯತ್ನವಾಗಿ ಪರಿಣಮಿಸಿದ್ದು, ಟಿಎಂಸಿ ಯಾವುದೇ ರೀತಿಯ ಅಧಿಕಾರ ವಿರೋಧಿ ಅಲೆ ಇಲ್ಲದೇ 178 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದ್ದು ಭರ್ಜರಿ ಜಯದತ್ತ ದಾಪುಗಾಲು ಹಾಕಿದೆ.  

8. ಪಶ್ಚಿಮಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಸ್ಪಷ್ಟ ಬಹುಮತದತ್ತ ಸಾಗಿದ್ದು,,  ಟಿಎಂಸಿ 215 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸಿಪಿಎಂ ಮತ್ತು ಕಾಂಗ್ರೆಸ್ ಮೈತ್ರಿಕೂಟ 63 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 

9. ಬಬಾನಿಪುರ ಕ್ಷೇತ್ರದಲ್ಲಿ ಟಿಎಂಸಿಯ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಚಂದ್ರಬೋಸ್ ಮೂರನೇ ಸ್ಥಾನದಲ್ಲಿದ್ದಾರೆ.  ಸಿಲಿಗುರಿಯಲ್ಲಿ ಟಿಎಂಸಿ ಅಭ್ಯರ್ಥಿ ಬೈಚುಂಗು ಭುಟಿಯಾ ಸಿಪಿಎಂ ಅಭ್ಯರ್ಥಿ ಅಶೋಕ್ ಭಟ್ಟಾಚಾರ್ಯ ಅವರಿಗಿಂತ 1373 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.  ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಖರಗ್‌ಪುರದಲ್ಲಿ ಮುನ್ನಡೆ, ಮುರ್ಷಿದಾಬಾದ್‌ನಲ್ಲಿ ಕಾಂಗ್ರೆಸ್ ಎಲ್ಲಾ ಸ್ಥಾನಗಳಲ್ಲಿ ಮುನ್ನಡೆ. 

10. ಇದುವರೆಗಿನ ಫಲಿತಾಂಶದ ಪ್ರಕಾರ ಟಿಎಂಸಿ 212 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸಿಪಿಎಂ, ಕಾಂಗ್ರೆಸ್ ಮೈತ್ರಿಕೂಟ 72 ಕ್ಷೇತ್ರಗಳಲ್ಲಿ ಬಿಜೆಪಿ 7 ಕ್ಷೇತ್ರಗಳಲ್ಲಿ ಮತ್ತು ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 

11. ತೃಣಮೂಲ ಕಾಂಗ್ರೆಸ್ ಪಕ್ಷವು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿಚ್ಚಳ ಬಹುಮತ ಸಾಧಿಸಿದ್ದು, ಪಕ್ಷವು 148ರ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಸತತ ಎರಡನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ. ಇದುವರೆಗೆ ಪ್ರಕಟವಾದ ಫಲಿತಾಂಶದಲ್ಲಿ ಟಿಎಂಸಿ 182 ಸ್ಥಾನಗಳಲ್ಲಿ ಜಯಗಳಿಸಿದ್ದು, 29 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಸಿಪಿಎಂ 51 ಸ್ಥಾನಗಳಲ್ಲಿ ಜಯಗಳಿಸಿದ್ದು 25ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರೆ ಪಕ್ಷಗಳು 4ರಲ್ಲಿ ಜಯಗಳಿಸಿದೆ ಮತ್ತು ಬಿಜೆಪಿ 3 ರಲ್ಲಿ ಜಯಗಳಿಸಿದೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ ಲೈವ್: ಕ್ಷಣ ಕ್ಷಣದ ಸುದ್ದಿಗಳಿಗಾಗಿ ಕ್ಲಿಕ್ಕಿಸಿ