Select Your Language

Notifications

webdunia
webdunia
webdunia
webdunia

ಪಶ್ಚಿಮ ಬಂಗಾಲದಲ್ಲಿ ಇಂದು ಎರಡನೇ ಹಂತದ ಮತದಾನ: ಮತದಾರರಿಗೆ ಮೋದಿ ಹೇಳಿದ್ದೇನು

PM Modi
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ಇಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಮತದಾರರಿಗೆ ಸಂದೇಶ ರವಾನಿಸಿದ್ದಾರೆ.

ಪಶ್ಚಿಮ ಬಂಗಾದಲ್ಲಿ ಈಗಾಗಲೇ ಮೊದಲ ಹಂತದ ಮತದಾನ ಪ್ರಕ್ರಿಯೆ ಏಪ್ರಿಲ್ 23 ರಂದು ನಡೆದಿತ್ತು. ಇದೀಗ ಎರಡನೇ ಹಂತದಲ್ಲಿ ಉಳಿದ 142 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಎರಡನೇ ಹಂತದಲ್ಲಿ ಹೌರಾ, ಕೋಲ್ಕತ್ತಾ, ಹೂಗ್ಲಿ, ಬರ್ಧಮಾನ್ ಸೇರಿದಂತೆ 7 ಪ್ರಮುಖ ಜಿಲ್ಲೆಗಳಿವೆ. ಮೊದಲ ಹಂತದಲ್ಲಿ ಶೇ.93.19 ರಷ್ಟು ಮತದಾನವಾಗಿತ್ತು. ಎರಡನೇ ಹಂತದಲ್ಲಿ ಎಷ್ಟು ಮತದಾನವಾಗುತ್ತದೆ ಕಾದು ನೋಡಬೇಕಿದೆ.

ಇಂದು ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ಮೋದಿ ಸಂದೇಶ ನೀಡಿದ್ದು ‘ಇಂದು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ 2026ರ ಎರಡನೇ ಹಂತದ ಮತದಾನ ನಡೆಯುತ್ತಿದೆ.

ನಮ್ಮ ಪ್ರಜಾಪ್ರಭುತ್ವವನ್ನು ಇನ್ನಷ್ಟು ಚೈತನ್ಯಶೀಲ ಮತ್ತು ಪಾಲ್ಗೊಳ್ಳುವಿಕೆಯುಳ್ಳದ್ದನ್ನಾಗಿ ಮಾಡಲು ಇಂದು ಮತದಾನ ಮಾಡುತ್ತಿರುವವರೆಲ್ಲರೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಬೇಕೆಂದು ನಾನು ವಿನಂತಿಸುತ್ತೇನೆ. ವಿಶೇಷವಾಗಿ, ಪಶ್ಚಿಮ ಬಂಗಾಳದ ಮಹಿಳಾ ಮತ್ತು ಯುವ ಶಕ್ತಿಯು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗುವುದು ಅತ್ಯಂತ ತುರ್ತು ಅಗತ್ಯವಾಗಿದೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ