Select Your Language

Notifications

webdunia
webdunia
webdunia
webdunia

ಮೂರು ರಾಜ್ಯಗಳಲ್ಲಿ ಅರಳಿದ ಕಮಲ: ಇಂದು ಸಂಜೆ ಪ್ರಧಾನಿ ಮೋದಿ ಮಹತ್ವದ ಸಂದೇಶ

PM Modi
ನವದೆಹಲಿ: ಪಂಚ ರಾಜ್ಯ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿಯತ್ತ ಸಾಗಿದ್ದು ಇಂದು ಸಂಜೆ ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈ ಚುನಾವಣೆ ಬಿಜೆಪಿ ಮತ್ತು ಸ್ಥಳೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿತ್ತು. ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ನಡುವೆ ಪಶ್ಚಿಮ ಬಂಗಾಲ ಗೆಲುವು ಬಿಜೆಪಿಗೆ ಚಾರಿತ್ರಿಕ ಗೆಲುವಾಗಿದೆ.

ಪಶ್ಚಿಮ ಬಂಗಾಲದಲ್ಲಿ ತನ್ನದೇ ಹಿಡಿತ ಸಾಧಿಸಿದ್ದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯನ್ನು ಸೋಲಿಸುವುದು ಸುಲಭದ ಮಾತಾಗಿರಲಿಲ್ಲ. ಆದರೆ ಈ ಬಾರಿ ಆಡಳಿತ ವಿರೋಧಿ ಅಲೆ, ಮತ ಪರಿಷ್ಕರಣೆ ಬಿಜೆಪಿ ಪರ ಕೆಲಸ ಮಾಡಿದೆ.

ಈ ಗೆಲುವು ಬಿಜೆಪಿಯ ಉತ್ಸಾಹ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಇಂದು ಸಂಜೆ ಬಿಜೆಪಿ ಪ್ರಧಾನ ಕಚೇರಿಗೆ ಬಂದು ಭಾಷಣ ಮಾಡಲಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು  ಉದ್ದೇಶಿಸಿ ಮಾತನಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡು ಚುನಾವಣೆಯ ಫಲಿತಾಂಶ ಅಚ್ಚರಿ ಮೂಡಿಸಿದೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್