Select Your Language

Notifications

webdunia
webdunia
webdunia
webdunia

ಲೈಂಗಿಕ ದೌರ್ಜನ್ಯಕ್ಕೊಳಗಾದ ಹುಡುಗಿಗೆ ಅಕ್ರಮ ಗರ್ಭಪಾತ. ಕೊನೆಗೆ ಆಗಿದ್ದೇನು?

ಲೈಂಗಿಕ ದೌರ್ಜನ್ಯಕ್ಕೊಳಗಾದ ಹುಡುಗಿಗೆ ಅಕ್ರಮ ಗರ್ಭಪಾತ. ಕೊನೆಗೆ ಆಗಿದ್ದೇನು?
ಜೈಪುರ , ಶನಿವಾರ, 5 ಡಿಸೆಂಬರ್ 2020 (06:51 IST)
ಜೈಪುರ : 25 ವರ್ಷದ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ 17 ವರ್ಷದ ಹುಡುಗಿ ಗರ್ಭಿಣಿಯಾಗಿದ್ದು, ಆಕೆಗೆ ಅಕ್ರಮವಾಗಿ ಗರ್ಭಪಾತ ಮಾಡಿಸಲು ಹೋಗಿ ಆಕೆ ಮೃತಪಟ್ಟ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

ಕಳೆದ 3 ವರ್ಷಗಳಿಂದ ಯುವಕ ಹುಡುಗಿಯ ಮೇಲೆ ಮಾನಭಂಗ ಎಸಗಿದ್ದಾನೆ. ಇದರಿಂದ ಆಕೆ ಗರ್ಭಧರಿಸಿದ್ದಾಳೆ. ಆಗ ಆತ ಆಕೆಯನ್ನು ದಾದಿಯ ಬಳಿ ಕರೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ಮನೆಗೆ ಬಂದ ಹುಡುಗಿಗೆ ಆರೋಗ್ಯ ಸಮಸ್ಯೆ ಕಾಡಿದ ಕಾರಣ ಆಕೆಯ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಆಕೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಕ್ರಮವಾಗಿ ಗರ್ಭಪಾತ ಮಾಡಿಸಿದ ದಾದಿ ಮತ್ತು ಅತ್ಯಾಚಾರ ಆರೋಪಿ ಯುವಕನನ್ನು ಬಂಧಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ತರಗತಿಯೊಳಗೆ ಸಮವಸ್ತ್ರದಲ್ಲಿಯೇ ಮಾಡಬಾರದನ್ನು ಮಾಡಿದ ಅಪ್ರಾಪ್ತ ವಿದ್ಯಾರ್ಥಿಗಳು