Select Your Language

Notifications

webdunia
webdunia
webdunia
Thursday, 17 April 2025
webdunia

ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ಸೇರಿ ಮಾಡಿದ್ದೇನು ಗೊತ್ತಾ?

ಆಗ್ರಾ
ಆಗ್ರಾ , ಮಂಗಳವಾರ, 24 ನವೆಂಬರ್ 2020 (06:45 IST)
ಆಗ್ರಾ :  ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ 21 ವರ್ಷ ವಯಸ್ಸಿನ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ಉತ್ತರ ಪ್ರದೇಶದ ಮಥುರಾದ ಪಿಪ್ರೌಲಿ ಗ್ರಾಮದಲ್ಲಿ ನಡೆದಿದೆ.

ಜ್ಯಾತಿ ಮತ್ತು ಪಂಕಜ್ ಮೃತಪಟ್ಟ ಪ್ರೇಮಿಗಳು, ಇವರು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರು ದೂರ ಸಂಬಂಧಿಗಳಾದ ಕಾರಣ ಇವರ ಮದುವೆಗೆ ಇಬ್ಬರ ಮನೆಯವರು ಒಪ್ಪಿಗೆ ನೀಡಲಿಲ್ಲ. ಅಲ್ಲದೇ ಹುಡುಗಿಗೆ ಬೇರೆ ಹುಡುಗನ ಜೊತೆ ಮದುವೆ ನಿಶ್ಚಯ ಮಾಡಲು ಮುಂದಾಗಿದ್ದರು. ಇದರಿಂದ ನೊಂದ ಇಬ್ಬರು ಪ್ರೇಮಿಗಳು ಇಂತಹ ನಿರ್ಧಾರಕ್ಕೆ ಬಂದಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹಾಗೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ದೂರು ದಾಖಲಿಸಲಿಲ್ಲ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಮುನಿಸಿಕೊಂಡು ತವರು ಮನೆಗೆ ಹೋಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪೊಲೀಸ್ ಸಿಬ್ಬಂದಿ