Select Your Language

Notifications

webdunia
webdunia
webdunia
webdunia

ಸಂಸತ್ತಿನ ಉಭಯ ಸದನಗಳ ಜಂಟಿ ಸಮಾವೇಶದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದೇನು?

ಸಂಸತ್ತಿನ ಉಭಯ ಸದನಗಳ  ಜಂಟಿ ಸಮಾವೇಶದಲ್ಲಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದೇನು?
ನವದೆಹಲಿ , ಗುರುವಾರ, 20 ಜೂನ್ 2019 (12:59 IST)
ನವದೆಹಲಿ : ಇಂದು ನಡೆದ ಸಂಸತ್ತಿನ ಉಭಯ ಸದನಗಳ  ಜಂಟಿ ಸಮಾವೇಶದಲ್ಲಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಭೆಯನ್ನುದ್ದೇಶಿ ಮಾತನಾಡಿದ್ದಾರೆ.




ಈ ವೇಳೆ ಮಾತನಾಡಿದ ಅವರು ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನಾಚರಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನೂತನ ಲೋಕಸಭೆ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಿರುವುದಕ್ಕೆ ಹೆಮ್ಮೆ ಪಟ್ಟಿದ್ದಾರೆ. ಹಾಗೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ಎಲ್ಲಾ ಮತದಾರರಿಗೂ, ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಚುನಾವಣೆ ಆಯೋಗ, ಭದ್ರತಾ ಪಡೆಗಳು, ಎಲ್ಲ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.


ಇದೇ ವೇಳೆ ಮಾತನಾಡಿದ ಅವರು, ಅನ್ನದಾತರಿಗೆ ನೆರವು ನೀಡಲು ಕೇಂದ್ರ ಸರ್ಕಾರ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಸಮ್ಮಾನ್ ಯೋಜನೆ ಮೂಲಕ ರೈತರಿಗೆ ನೆರವು ನೀಡಲಾಗುತ್ತಿದೆ. ಕೃಷಿ ಉತ್ಪಾದನೆ ಹೆಚ್ಚಿಸಲು 25ಲಕ್ಷ ಕೋಟಿ ರೂ.ಗಳ ಅನುದಾನವನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದೆ. ಸಣ್ಣವ್ಯಾಪಾರಿಗಳಿಗೆ ನೂತನ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದ್ದು ಇದರಿಂದ 3ಕೋಟಿ ಉದ್ದಿಮೆದಾರರಿಗೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಸಂಸದೆ ನುಸ್ರತ್ ಜಹಾನ್ ಅವರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗೈರಾಗಿದ್ದೇಕೆ?