Publish Date: Mon, 17 Sep 2018 (13:03 IST)
Updated Date: Mon, 17 Sep 2018 (13:05 IST)
ದೆಹಲಿ : ವಿದ್ಯಾರ್ಥಿಗಳಿಗೆ ತಿಳಿಯದಂತೆ ಅವರ ಆಕ್ಷೇಪಾರ್ಹ ವಿಡಿಯೋಗಳನ್ನು ತೆಗೆಯುತ್ತಿದ್ದ ದೆಹಲಿ ಸರ್ಕಾರಿ ಶಾಲೆಯ ಶಿಕ್ಷಕನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಇತ ದೆಹಲಿಯ ಸರ್ಕಾರಿ ಶಾಲೆಯೊಂದರಲ್ಲಿ ಸಂಸ್ಕೃತ ಶಿಕ್ಷಕನಾಗಿದ್ದು, ಶಾಲೆ ಮುಗಿದ ನಂತರ ತನ್ನ ವಿದ್ಯಾರ್ಥಿಗಳನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅಶ್ಲೀಲವಾದ ಪೊಸಿಷನ್ ಗಳಲ್ಲಿ ಅವರನ್ನ ನಿಲ್ಲಿಸಿ ವಿಡಿಯೋಗಳನ್ನು ಮಾಡುತ್ತಿದ್ದನು. ಅದರಲ್ಲಿ ಒಂದು ವಿಡಿಯೋ ವೈರಲ್ ಆಗಿದಾಗ ಶಿಕ್ಷಕನ ಈ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಈ ವಿಡಿಯೋವನ್ನು ನೋಡಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ಮಾಡಿ ಆ ಶಿಕ್ಷಕನ ಮೇಲೆ ಹಲ್ಲೆ ಮಾಡಲು ಮುಂದಾದರು. ಆಗ ಶಾಲಾ ಮುಖ್ಯಸ್ಥರು ತಕ್ಷಣ ಪೊಲೀಸರಿಗೆ ಫೋನ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಕೂಡಲೆ ಅಲ್ಲಿಗೆ ಆಗಮಿಸಿದ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ನಂತರ ವಿದ್ಯಾರ್ಥಿಗಳ ಹೇಳಿಕೆಯ ಮೇರೆಗೆ ಪೋಕ್ಸೋ ಕಾಯ್ದೆ ಅಡಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.