Publish Date: Thu, 19 Nov 2020 (06:58 IST)
Updated Date: Thu, 19 Nov 2020 (07:03 IST)
ಉತ್ತರಪ್ರದೇಶ : ಉತ್ತರ ಪ್ರದೇಶದ ಎತಾ ಜಿಲ್ಲೆಯ ಸಾರ್ವಜನಿಕ ಶೌಚಾಲಯವೊಂದರಲ್ಲಿ ದಲಿತ ಬಾಲಕಿಯ ಮೇಲೆ ಮೂವರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಬಾಲಕಿ ಮಗುವನ್ನು ಕರೆದುಕೊಂಡು ಶೌಚಾಲಯಕ್ಕೆ ತೆರಳಿದಾಗ ಹಳ್ಳಿಯ ಮಾಜಿ ಮುಖ್ಯಸ್ಥ ಮತ್ತು ಇತರ ಇಬ್ಬರು ವ್ಯಕ್ತಿಗಳು ಸೇರಿ ಇಂತಹ ನೀಚ ಕೃತ್ಯ ಎಸಗಿದ್ದಾರೆ. ಬಾಲಕಿ ಈ ಬಗ್ಗೆ ಕುಟುಂಬದವರಿಗೆ ತಿಳಿಸಿದ ಕಾರಣ ದೂರು ದಾಖಲಿಸಲು ಕುಟುಂಬಸ್ಥರು ಪೊಲೀಸ್ ಠಾಣೆಗೆ ತೆರಳಿದಾಗ ಅವರನ್ನು ಠಾಣೆಯಿಂದ ಹೊರಹಾಕಲಾಗಿದೆ ಎನ್ನಲಾಗಿದೆ.