Select Your Language

Notifications

webdunia
webdunia
webdunia
webdunia

ಜಾತ್ರೆಗೆ ಮುಗಿಸಿ ಮನೆಗೆ ಬರುತ್ತಿದ್ದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ!

ಜಾತ್ರೆಗೆ ಮುಗಿಸಿ ಮನೆಗೆ ಬರುತ್ತಿದ್ದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ!
ರಾಂಚಿ , ಗುರುವಾರ, 3 ಡಿಸೆಂಬರ್ 2020 (07:10 IST)
ರಾಂಚಿ :  15 ವರ್ಷದ ಆದಿವಾಸಿ ಹುಡುಗಿ ಮೇಲೆ 5 ಪುರುಷರು ಸಾಮೂಹಿಕ ಮಾನಭಂಗ ಎಸಗಿದ ಘಟನೆ  ಜಾರ್ಖಂಡ್ ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ.

ಹುಡುಗಿ ತನ್ನ ಹಳ್ಳಿಯಿಂದ ಸುಮಾರು 12 ಕಿ.ಮೀ.ದೂರದಲ್ಲಿರುವ ಜಾತ್ರೆಗೆ ತೆರಳಿದ್ದಾಳೆ. ಅಲ್ಲಿಂದ ರಾತ್ರಿ 9.30ಕ್ಕೆ ಹುಡುಗಿ ನಾಲ್ವರು ಗಂಡುಮಕ್ಕಳ ಜೊತೆ ಮನೆಗೆ ತೆರಳುತ್ತಿದ್ದಾಗ 5 ಪುರುಷರು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಆಗ ಹುಡುಗಿ ಅವರ ಕೈಗೆ ಸಿಕ್ಕಿಹಾಕಿಕೊಂಡಿದ್ದು, ಉಳಿದವರು ತಪ್ಪಿಸಿಕೊಂಡಿದ್ದಾರೆ. ಆ ವೇಳೆ ಅವರು ಇಂತಹ ಘೋರ ಕೃತ್ಯ ಎಸಗಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಕಾರಣ ಪೊಲೀಸರು ಹುಡುಗಿಯನ್ನು ರಕ್ಷಿಸಲು ದಾಳಿ ನಡೆಸಿದ್ದಾರೆ.  ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಹೋದರಿಯೊಂದಿಗೆ ಜಗಳವಾಡಿ ಮನೆಬಿಟ್ಟ ಹುಡುಗಿಗೆ ಕೊನೆಗೆ ಆಗಿದ್ದೇನು?