Publish Date: Thu, 28 Jan 2021 (07:36 IST)
Updated Date: Thu, 28 Jan 2021 (07:40 IST)
ಬಾಗಪತ್ : ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಪುರುಷ ಸಹೋದ್ಯೋಗಿ ಮಾನಭಂಗ ಎಸಗಿದ ಹಿನ್ನಲೆಯಲ್ಲಿ ಸಂತ್ರಸ್ತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ವಿವಾಹಿತೆಯಾಗಿದ್ದ ಮಹಿಳಾ ಕಾನ್ ಸ್ಟೇಬಲ್ ಪತಿಗೆ ವಿಚ್ಛೇದನ ನೀಡಿ ಆರೋಪಿಯ ಜೊತೆ ಬಂದಿದ್ದಾಳೆ. ಆಗ ಆರೋಪಿ ಆಕೆಯ ಮೇಲೆ ಹಲವು ಬಾರಿ ಮಾನಭಂಗ ಎಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ಬೇಸರಗೊಂಡ ಸಂತ್ರಸ್ತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.