ನವದೆಹಲಿ : 75ನೇ ಸ್ವಾತಂತ್ರ್ಯ ದಿನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮದ ತಮ್ಮ ಖಾತೆಗಳ ಡಿಪಿಯನ್ನು ಬದಲಾಯಿಸಿದ್ದು, ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿದ್ದಾರೆ.
ದೇಶದ ಜನತೆಯೂ ತಮ್ಮ ಡಿಪಿಯಲ್ಲಿ ತ್ರಿವರ್ಣ ಧ್ವಜದ ಚಿತ್ರ ಹಾಕಿಕೊಳ್ಳುವಂತೆ ಕರೆ ನೀಡಿದ್ದಾರೆ.
ʼಆಗಸ್ಟ್ 2 ವಿಶೇಷವಾದ ದಿನ! ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ, ನಮ್ಮ ರಾಷ್ಟ್ರವು ತ್ರಿವರ್ಣ ಧ್ವಜವನ್ನು ಗೌರವಿಸುವ ಸಾಮೂಹಿಕ ಆಂದೋಲನವಾದ ಹರ್ ಘರ್ ತಿರಂಗಾಗೆ ಸಿದ್ಧವಾಗಿದೆ.
ನಾನು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ DP ಅನ್ನು ಬದಲಾಯಿಸಿದ್ದೇನೆ. ನೀವು ಕೂಡ ಹಾಗೆಯೇ ಮಾಡಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ.