ಕರಾಚಿ :ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದು, ಇದು ಪ್ರಜಾಪ್ರಭುತ್ವದ ಮೇಲೆ ಕಪ್ಪುಚುಕ್ಕೆ ಎಂದು ವಿಷ ಕಾರಿಕೊಂಡಿದೆ. ಭಾರತದ ಮುಸ್ಲಿಮರನ್ನು ಮೂಲೆಗುಂಪು ಮಾಡುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದಲ್ಲಿ ಬಹುಸಂಖ್ಯಾತರ ಮೇಲುಗೈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಸೋಮವಾರ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯ ಸಂಪನ್ನಗೊಂಡಿದೆ. ದೇಶವಿದೇಶಗಳಲ್ಲಿ ಜನರು ರಾಮೋತ್ಸವದ ಘಳಿಗೆಯಲ್ಲಿ ಭಾಗಿಯಾಗಿ ಸಂಭ್ರಮಪಟ್ಟಿದ್ದಾರೆ. ಇದೇ ವೇಳೆ ಭಾರತದ ನೆರೆರಾಷ್ಟ್ರ ಪಾಕಿಸ್ತಾನ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಸ್ಥಳದಲ್ಲಿ ಕಟ್ಟಿರುವ ರಾಮಬಂದಿರದ ಬಗ್ಗೆ ತನ್ನ ಪ್ರತಿಕ್ರಿಯೆಯನ್ನು ಹೊರಹಾಕಿದೆ. ಮುಂದೆ ಕಾಶಿಯ ಜ್ಞಾನವ್ಯಾಪಿ ಮಸೀದಿ ಹಾಗೂ ಮಥುರಾದ ಶಾಹಿ ಈದ್ಗಾ ಮಸೀದಿಗೂ ಸಹ ಆತಂಕ ಶುರುವಾಗಿದೆ ಎಂದು ಪಾಕ್ ಹೇಳಿದೆ