Select Your Language

Notifications

webdunia
webdunia
webdunia
webdunia

ಉತ್ತರ ಪ್ರದೇಶದ ಜನರಿಗೆ ಸರ್ಕಾರದ ಕೊಡುಗೆ ಏನು? ತಿಳಿಯಿರಿ

ಉತ್ತರ ಪ್ರದೇಶದ ಜನರಿಗೆ ಸರ್ಕಾರದ ಕೊಡುಗೆ ಏನು? ತಿಳಿಯಿರಿ
ಲಖನೌ , ಸೋಮವಾರ, 25 ಅಕ್ಟೋಬರ್ 2021 (13:27 IST)
ಲಖನೌ : ಸ್ವಚ್ಛ, ಸಮೃದ್ಧ ಉತ್ತರ ಪ್ರದೇಶದ ಆಶೋತ್ತರ ಈಡೇರಿಸಲು ಬಿಜೆಪಿಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬದ್ಧವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಉತ್ತರ ಪ್ರದೇಶದ ವಿವಿಧೆಡೆ 9 ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು 9 ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು. ಸಿದ್ಧಾರ್ಥನಗರ, ಇಟಾ, ಹರ್ದೋಯಿ, ಪ್ರತಾಪಗಡ, ಫತೇಪುರ, ದೆರಾಯ್, ಘಾಜಿಪುರ, ಮಿರ್ಝಾಪುರ ಮತ್ತು ಜೌನ್ಪುರ್ ಜಿಲ್ಲೆಗಳಲ್ಲಿ ಹೊಸ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಲಿವೆ.
ಅನಾರೋಗ್ಯ ಕೇವಲ ಬಡವರಿಗೆ ಮಾತ್ರವಲ್ಲ ಯಾರನ್ನು ಬೇಕಾದರೂ ಕಾಡಬಹುದು. ನಮ್ಮ ಡಬಲ್ ಎಂಜಿನ್ ಸರ್ಕಾರವು ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡಿದೆ. ಸಾವಿರಾರು ಜನೌಷಧಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸೆ ಡಯಾಲಿಸಿಸ್ ಮತ್ತು ಹೃದ್ರೋಗ ಚಿಕಿತ್ಸೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದು ಉತ್ತರ ಪ್ರದೇಶ ಮಾತ್ರವಲ್ಲ ಇಡೂಈ ದೇಶದಲ್ಲಿ ಹತ್ತಾರು ಅತ್ಯುತ್ತಮ ಆಸ್ಪತ್ರೆಗಳು ನಮ್ಮ ಸರ್ಕಾರ ಆರಂಭಿಸಿದೆ ಎಂದು ನರೇಂದ್ರ ಮೋದಿ ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಆ ಈರುಳ್ಳಿಯಲ್ಲಿ ಅಂತದ್ದದ್ರು ಏನಿತ್ತು!?