Select Your Language

Notifications

webdunia
webdunia
webdunia
webdunia

ಮದುವೆಗೆ ಬಂದಿದ್ದ ಅಪ್ರಾಪ್ತೆಗೆ ಆಗಿದ್ದೇನು?!

ಲಕ್ನೋ
ಲಕ್ನೋ :  ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಪ್ರಕರಣ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಇದೀಗ ಬೆಳಕಿಗೆ ಬಂದಿದೆ.

ಆರೋಪಿಯನ್ನು ನಿಸಾರ್(27) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ನೇಕಾರ. ಈ ಘಟನೆ ಸಿಗ್ರಾದ ಲಲ್ಲಾಪುರದಲ್ಲಿ ನಡೆದಿದೆ.

ಮದುವೆಗೆಂದು ತನ್ನ ಅಜ್ಜಿಯ ಜೊತೆ 6 ವರ್ಷದ ಬಾಲಕಿ ಲಲ್ಲಾಪುರಕ್ಕೆ ಹೋಗಿದ್ದಳು. ನಿಸ್ಸಾರ್ ಆ ಬಾಲಕಿಯನ್ನು ತನ್ನೊಂದಿಗೆ ಕೆರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಭಾನುವಾರ ಈ ಘಟನೆ ನಡೆದಿದ್ದು, ಆರೋಗ್ಯದಲ್ಲಿ ಏರುಪೇರಾದಾಗ ಈ ಅಮಾನವೀಯ ಕೃತ್ಯವನ್ನು ಬಾಲಕಿಯು ಮನೆಯವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಸಂತ್ರಸ್ತೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಿಸಾರ್ ವಿರುದ್ಧ ದೂರು ದಾಖಲಿಸಿದ್ದಾರೆ.

ಘಟನೆಯ ನಂತರ ಆರೋಪಿ ತಲೆಮರೆಸಿಕೊಂಡಿದ್ದು, ಆರೋಪಿಗಾಗಿ ಶೋಧ ನಡೆಯುತ್ತಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಳ್ಳನನ್ನು ಥಳಿಸಿ ಕೊಂದ ಕೊಂದ ಗ್ರಾಮಸ್ಥರು