Webdunia - Bharat's app for daily news and videos

Install App

ಚುನಾವಣೆಯಲ್ಲಿ ಸೋತು ಸುಣ್ಣವಾದ ಬಳಿಕ ಯುಟ್ಯೂಬ್ ಚಾನಲ್‌ ಆರಂಭಿಸಿ ಎಎಪಿ ನಾಯಕ ಹೇಳಿದ್ದೇನು

Sampriya
ಗುರುವಾರ, 13 ಫೆಬ್ರವರಿ 2025 (14:48 IST)
Photo Courtesy X
ನವದೆಹಲಿ: ಈಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 27 ವರ್ಷಗಳ ಬಳಿಕ ಮತ್ತೆ ಅಧಿಕಾರ ಹಿಡಿದಿದೆ. ಹತ್ತು ವರ್ಷಗಳಿಂದ ಆಡಳಿತ ನಡೆಸಿದ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಸೋತು ಸುಣ್ಣವಾಗಿದೆ.

ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಸೇರಿದಂತೆ ಎಎಪಿಯ ಘಟಾನುಘಟಿ ನಾಯಕರು ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ. ಕೇಜ್ರಿವಾಲ್‌ ಅವರು ಆಪ್ತರಲ್ಲಿ ಒಬ್ಬರಾಗಿರುವ  ಸೌರಭ್‌ ಭಾರದ್ವಾಜ್‌ ಅವರೂ ಸೋತಿದ್ದಾರೆ.

ಗ್ರೇಟರ್‌ ಕೈಲಾಶ್ ಕ್ಷೇತ್ರದಿಂದ ಸ್ಪರ್ಧಿಸಿದ್ದ  ಎಎಪಿ ನಾಯಕ ಸೌರಭ್‌ ಭಾರದ್ವಾಜ್‌ ಅವರು ಬಿಜೆಪಿಯ ಶಿಖಾ ರಾಯ್‌ ವಿರುದ್ಧ ಸೋಲು ಕಂಡಿದ್ದಾರೆ. ಇದೀಗ  ಸೌರಭ್‌ ಅವರು ಚುನಾವಣೆಯಲ್ಲಿ ಸೋತ ಬಳಿಕ ಯುಟ್ಯೂಬ್‌ ಚಾನಲ್‌ ಆರಂಭಿಸಿದ್ದಾರೆ. ತಮ್ಮ ಚಾನಲ್‌ಗೆ ಅವರು ನಿರುದ್ಯೋಗಿ ನಾಯಕ (ಬೆರೋಜ್‌ಗರ್ ನೇತಾ) ಎಂದು ಹೆಸರಿಟ್ಟಿದ್ದಾರೆ.

ದೆಹಲಿಯ ಜನರೊಂದಿಗೆ ಸಂಹವನ ಸಾಧಿಸುವ ಉದ್ದೇಶದಿಂದ ಚಾನಲ್ ಶುರು ಮಾಡಿರುವ ಸೌರಭ್‌, ತಮ್ಮ ಚಾನಲ್‌ ಅನ್ನು ಪರಿಚಯಿಸುವ 58 ಸೆಕೆಂಡುಗಳ ವಿಡಿಯೊವನ್ನು ಯುಟ್ಯೂಬ್‌ ಹಾಗೂ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇಂದಿನಿಂದ ಹೊಸ ವಿಚಾರ ಹಾಗೂ ಹೊಸ ವಿಡಿಯೊದೊಂದಿಗೆ ಜನರ ಮುಂದೆ ಬರುವುದಾಗಿ ತಿಳಿಸಿದ್ದಾರೆ. ಈ ಚಾನಲ್‌ಗೆ ಈಗಾಲೇ 54 ಸಾವಿರಕ್ಕೂ ಹೆಚ್ಚು ಮಂದಿ ಚಂದಾದಾರರಾಗಿದ್ದಾರೆ.

ಈ ಚಾನೆಲ್‌ನಲ್ಲಿ ಜನರ ಪ್ರಶ್ನೆಗಳಿಗೆ ಮುಕ್ತ ಹಾಗೂ ಪಾರದರ್ಶಕ ರೀತಿಯಲ್ಲಿ ಉತ್ತರ ನೀಡುತ್ತೇನೆ. ಪ್ರತಿದಿನವೂ ಹೊಸ ವಿಷಯಗಳೊಂದಿಗೆ ಕಾಣಿಸಿಕೊಳ್ಳುವ ಭರವಸೆ ನೀಡಿದ್ದಾರೆ. ಹಾಗೆಯೇ, ಜನರು ತಮ್ಮೊಂದಿಗೆ ಸಂವಾದ ನಡೆಸಲು ಈ ವೇದಿಕೆಯು ಅವಕಾಶ ಕಲ್ಪಿಸುತ್ತದೆ ಎಂದು ವೃತ್ತಿಯಿಂದ ಎಂಜಿನಿಯರ್‌ ಆಗಿದ್ದ ಸೌರಭ್‌ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments