ಅತ್ಯಾಚಾರ ಸಂತ್ರಸ್ತೆ ಕೋರ್ಟ್ ನಲ್ಲಿ ಸಾಕ್ಷಿ ಹೇಳಬಾರದೆಂದು ದುಷ್ಕರ್ಮಿಗಳು ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 14 ಜನವರಿ 2019 (06:36 IST)
ಗುಜರಾತ್ :  ನ್ಯಾಯಾಲಯದಲ್ಲಿ ಸಾಕ್ಷಿ ಹೇಳಬಾರದು ಎಂದು ಅತ್ಯಾಚಾರ ಸಂತ್ರಸ್ತೆಗೆ ದುಷ್ಕರ್ಮಿಗಳು ವಿಷಕುಡಿಸಿರುವ ಘಟನೆ ಗುಜರಾತ್‍ನ ದ್ವಾರಕ ಜಿಲ್ಲೆಯ ಹಠತಾಳ ಪ್ರದೇಶದಲ್ಲಿ ನಡೆದಿದೆ.


ಅತ್ಯಾಚಾರಕ್ಕೊಳಗಾದ 17 ವರ್ಷದ ಅಪ್ರಾಪ್ತ ಬಾಲಕಿ ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಎರಡು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿಯನ್ನು ಅಡ್ಡಗಟ್ಟಿ ತಮ್ಮ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಬಾರದು ಎಂದು ಬೆದರಿಸಿದ್ದು, ಇದಕ್ಕೆ ಬಾಲಕಿ ಒಪ್ಪದಿದ್ದಾಗ ಪಾಪಿಗಳು ಬಾಲಕಿಗೆ ಬಲವಂತವಾಗಿ ವಿಷ ಕುಡಿಸಿ ಪರಾರಿಯಾಗಿದ್ದಾರೆ.


ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಬಾಲಕಿಯನ್ನು ದಾರಿಹೋಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯಕ್ಕೆ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.


ಬಾಲಕಿಯ ಕುಟುಂಬದವರು ಈ ಬಗ್ಗೆ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಆದರೆ ಈ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದವರು ಜಾಮೀನು ಪಡೆದು ಜೈಲಿನಿಂದ ಹೊರಗಡೆ ಬಂದಿರುವ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಮುಚ್ಚಿಹಾಕಲು ಅವರೇ ಈ ಕೃತ್ಯವೆಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments