ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಬಹಿರಂಗವಾಗಿದೆ.
ಪಿಎಂ ಕಿಸಾನ್ ಯೋಜನೆಯನ್ನು 2018 ರಲ್ಲಿ ಆರಂಭಿಸಲಾಯಿತು. ವಿವಿಧ ಕಂತುಗಳಲ್ಲಾಗಿ ರೈತರಿಗೆ ವರ್ಷಕ್ಕೆ ಒಟ್ಟು 6,000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ವರ್ಷಕ್ಕೆ ಒಟ್ಟು ಮೂರು ಕಂತುಗಳಲ್ಲಿ ತಲಾ 2,000 ರೂ.ನಂತೆ ಅರ್ಹ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.
ಇದುವರೆಗೆ ಪಿಎಂ ಕಿಸಾನ್ ಯೋಜನೆಯಡಿ 18 ಕಂತುಗಳ ಹಣ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ ನಲ್ಲಿ 18 ನೇ ಕಂತಿನ ಹಣ ಬಿಡುಗಡೆಯಾಗಿತ್ತು. ಇದಾಗಿ ನಾಲ್ಕು ತಿಂಗಳು ಕಳೆದಿದೆ. ಇದೀಗ ಕೇಂದ್ರ ಸರ್ಕಾರ 19 ನೇ ಕಂತಿನ ಹಣ ಬಿಡುಗಡೆ ಮಾಡಲು ಮುಂದಾಗಿದೆ.
ಈ ಯೋಜನೆಯಡಿ 19 ನೇ ಕಂತಿನ ಹಣವನ್ನು ಫೆಬ್ರವರಿ 24, 2025 ರಂದು ಆಯಾ ಅರ್ಹ ರೈತರ ಖಾತೆಗೆ ಜಮೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಆದರೆ ಇದಕ್ಕೆ ಮೊದಲು ಎಲ್ಲಾ ರೈತರು ತಮ್ಮ ಖಾತೆಯ ಇ-ಕೆವೈಸಿ ಮತ್ತು ಭೂ ದಾಖಲೆಗಳ ಪರಿಶೀಲನೆಯನ್ನು ಮಾಡುವುದು ಕಡ್ಡಾಯವಾಗಿದೆ. ಇಲ್ಲದೇ ಹೋದರೆ ಹಣ ಜಮೆ ಆಗದು.