ಪಠಾಣ್‌ಕೋಟ್ ವಾಯುನೆಲೆ ದಾಳಿಕೋರರು ಯಾರು: ಪ್ರಧಾನಿಗೆ ದಿಗ್ವಿಜಯ್ ಪ್ರಶ್ನೆ

Webdunia
ಶನಿವಾರ, 4 ಜೂನ್ 2016 (15:49 IST)
ಪಠಾಣ್‌ಕೋಟ್ ವಾಯುನೆಲೆ ಮೇಲೆ ಪಾಕಿಸ್ತಾನದ ಪಾತ್ರವಿಲ್ಲವೆಂದಾದರೆ, ದಾಳಿಕೋರರು ಯಾರೆಂದು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪ್ರಧಾನಿ ಮೋದಿ ಅವರಿಗೆ ಸವಾಲೆಸೆದಿದ್ದಾರೆ. 
ಪಠಾಣ್ ಕೋಟ್ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿಲ್ಲ ಎಂದು ಎನ್ಐಎ ಕ್ಲೀನ್ ಚಿಟ್ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ. 
 
ಗೋವಾದ ರಾಜಧಾನಿ ಪಣಜಿಯಲ್ಲಿ ಮಾತನ್ನಾಡುತ್ತಿದ್ದ ಸಿಂಗ್, ಪಠಾಣ್‌ಕೋಟ್ ದಾಳಿಯಲ್ಲಿ ಪಾಕ್ ಪಾತ್ರವಿಲ್ಲ ಎಂದು ಎನ್ಎಸ್ಎ ಕ್ಲೀನ್ ಚಿಟ್ ನೀಡಿದೆ. ಹಾಗಾದರೆ ವಾಯುನೆಲೆ ಮೇಲೆ ದಾಳಿ ಮಾಡಿದ ಉಗ್ರರು ಯಾರೆಂದು ಪ್ರಧಾನಿ ಅಥವಾ ರಾಷ್ಟ್ರೀಯ ಭದ್ರತಾ ಸಲಹೆಗಾರರು ವಿವರಿಸಲಿ ಎಂದಿದ್ದಾರೆ. 
 
ಈ ಬೆಳವಣಿಗೆ ರಾಜತಾಂತ್ರಿಕ ಮತ್ತು ಆಂತರಿಕ ಭದ್ರತೆಯ ಸಾರ್ವಕಾಲಿಕ ವೈಫಲ್ಯ ಎಂದಿರುವ ಮಾಜಿ ಕೇಂದ್ರ ಸಚಿವ, ಎನ್‌ಎಸ್ಎ ಮತ್ತು ಗೃಹ ಸಚಿವರು ಈ ವಿಷಯದಲ್ಲಿ ಶುದ್ಧರೆಂಬುದನ್ನು ಸಾಬೀತು ಪಡಿಸಬೇಕು ಎಂದು ಆಗ್ರಹಿಸಿದ್ದಾರೆ. 
 
ದಾಳಿಯಲ್ಲಿ ಎಷ್ಟು ಜನ ಭಯೋತ್ಪಾದಕರು ಹತ್ಯೆಯಾದರು ಎಂಬುದು ಸಹ ಸರ್ಕಾರಕ್ಕೆ ತಿಳಿದಿಲ್ಲ. ಎನ್ಎಸ್ಎ ನೀಡಿರುವ ಅಂಕಿಅಂಶ ಮತ್ತು ನಿಜವಾಗಿ ಸಿಕ್ಕ ಉಗ್ರರ ಶವಗಳ ಸಂಖ್ಯೆಯಲ್ಲಿ ವ್ಯತ್ಯಾಶವಿದೆ ಎಂದು ಅವರು ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments