Select Your Language

Notifications

webdunia
webdunia
webdunia
webdunia

ಸುಪ್ರೀಂ ಕೋರ್ಟ್‌ನ ಮುಂದಿನ CJI ಯಾರು?

ಸುಪ್ರೀಂ ಕೋರ್ಟ್‌ನ ಮುಂದಿನ CJI ಯಾರು?
ನವದೆಹಲಿ , ಗುರುವಾರ, 4 ಆಗಸ್ಟ್ 2022 (13:02 IST)
ನವದೆಹಲಿ : ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸು ಮಾಡಿ ಸಿಜೆಐ ಎನ್.ವಿ.ರಮಣ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಎನ್.ವಿ.ರಮಣ ಅವರು 2022ರ ಆಗಸ್ಟ್ 26 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ಗೆ ನೂತನ ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ನ್ಯಾ.ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ರಮಣ ಅವರು ಭಾರತದ 48ನೇ ಮತ್ತು ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾಯಮೂರ್ತಿ ಲಲಿತ್ ಅವರು 49ನೇ ಸಿಜೆಐ ಆಗಲಿದ್ದಾರೆ. 

ಉದಯ್ ಉಮೇಶ್ ಲಲಿತ್ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು. ನ್ಯಾಯಾಧೀಶರಾಗುವ ಮೊದಲು, ಅವರು ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ವಕೀಲರಾಗಿದ್ದರು. ನ್ಯಾಯಮೂರ್ತಿ ಲಲಿತ್ ಅವರು ನೇರವಾಗಿ ಸುಪ್ರೀಂ ಕೋರ್ಟ್ಗೆ ಏರಿದ 6ನೇ ಹಿರಿಯ ವಕೀಲರಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೈಕಮಾಂಡ್‍ಗೆ ಬಿಎಸ್‍ವೈ ರಿಪೋರ್ಟ್