Publish Date: Thu, 27 Jan 2022 (10:02 IST)
Updated Date: Thu, 27 Jan 2022 (10:06 IST)
ಚಂಡೀಗಢ : ಪಂಜಾಬ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಮೃತಸರ ಪೂರ್ವ ಕ್ಷೇತ್ರದಿಂದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ವಿರುದ್ಧ,
ಶಿರೋಮಣಿ ಅಕಾಲಿದಳ (ಎಸ್ಎಡಿ) ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಸ್ಪರ್ಧಿಸಲಿದ್ದಾರೆ.
ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು, ಬಿಕ್ರಮ್ ಸಿಂಗ್ ಮಜಿಥಿಯಾ ಅವರು ಸಿಧು ಅವರ ದುರಹಂಕಾರವನ್ನು ಅಡಗಿಸಲಿದ್ದಾರೆ ಎಂದು ಹೇಳಿದ್ದಾರೆ. ಸುಖಬೀರ್ ಸಿಂಗ್ ಬಾದಲ್ ಅವರು ಬಿಕ್ರಮ್ ಸಿಂಗ್ ಮಜಿಥಿಯಾ ಅವರ ಸೋದರ ಮಾವ ಆಗಿದ್ದಾರೆ.
ಅಮೃತಸರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಖಬೀರ್ ಸಿಂಗ್ ಬಾದಲ್, ಸಿಧು ಅವರ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದನ್ನು ಮಜಿಥಿಯಾ ಖಚಿತಪಡಿಸಿಕೊಳ್ಳುತ್ತಾರೆ.