Select Your Language

Notifications

webdunia
webdunia
webdunia
webdunia

ಅಂಬೇಡ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ಏಕೆ ನೀಡಿಲ್ಲ- ಮೋದಿ ಪ್ರಶ್ನೆ

ಅಂಬೇಡ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ಏಕೆ ನೀಡಿಲ್ಲ- ಮೋದಿ ಪ್ರಶ್ನೆ
ಅಹಮದಾಬಾದ್ , ಬುಧವಾರ, 6 ಡಿಸೆಂಬರ್ 2017 (15:35 IST)
ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಕಾಂಗ್ರೆಸ್ ಪಕ್ಷ ಏಕೆ ನೀಡಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ
ಅವರು ಪಶ್ನಿಸಿದ್ದಾರೆ.

ಗುಜರಾತ್ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ ಪ್ರಧಾನಿ, ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ನಿಮಿತ್ತ ವಂದನೆ ಸಲ್ಲಿಸಿ ಮಾತನಾಡಿ, ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಒಂದು ಕುಟುಂಬ ದೊಡ್ಡ ಅನ್ಯಾಯ ಮಾಡಿದೆ ಎಂದು ಆರೋಪಿಸುವ ಮೂಲಕ ನೆಹರು ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜವಾಹರಲಾಲ್ ನೆಹರು ಅವರ ಪ್ರಭಾವ ಕಾಂಗ್ರೆಸ್ ಪಕ್ಷದಲ್ಲಿ ಇದ್ದಾಗ ಅಂಬೇಡ್ಕರ್ ಅವರು ಸಂವಿಧಾನ ಸಭೆಗೆ ಆಯ್ಕೆಯಾಗುವುದು ಕಠಿಣವಾಗಿತ್ತು ಎಂದು ದೂರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಾಕಷ್ಟು ಸುಧಾರಿಸಿದೆ. ಗುಜರಾತನ ಯುವ ಜನತೆಗೆ ಕರ್ಫ್ಯೂ ಎಂಬ ಪದದ ಪರಿಚಯವೇ ಇಲ್ಲವಾಗಿದೆ. ಯುವ ಜನತೆಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಸಾಮರ್ಥ್ಯ ನಿರ್ಮಾಣ ಮಾಡಲಾಗುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಂಪಯ್ಯ ಸಲಹೆ ತಪ್ಪೇನು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ