Publish Date: Sat, 20 Jan 2018 (06:51 IST)
Updated Date: Sat, 20 Jan 2018 (06:58 IST)
ರಾಂಚಿ : ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪಾಲ್ ಸಿಂಗ್ ಅವರು ತಮಗೆ ಹಾಗು ತಮ್ಮ ಇಬ್ಬರು ಮಕ್ಕಳ ರಕ್ಷಣೆಗಾಗಿ ಗನ್ ಲೈಸೆನ್ಸ್ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಮೂರೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಈಗ ಗನ್ ಲೈಸನ್ಸ್ ಗಾಗಿ ಅರ್ಜಿ ಸಲ್ಲಿಸಿದ್ದು ಹಲವರಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಹಾಗೆ ಅವರು ಲಾಲೂ ಪ್ರಸಾದ್ ಯಾದವ್ ಅವರ ಈ ಪ್ರಕರಣದ ತೀರ್ಪಿಗೂ ಮೊದಲು ಲಾಲೂ ಪರ ಹಲವರು ತಮ್ಮ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ಕೂಡ ಹೇಳಿದ್ದಾರೆ.
ಆದ್ದರಿಂದ ಈ ಬಗ್ಗೆ ಜಿಲ್ಲಾಧಿಕಾರಿ ಗಳ ಕಚೇರಿ ಸಿಬ್ಬಂದಿ, ನ್ಯಾಯಾಧೀಶರ ಅರ್ಜಿಯನ್ನು ಆದ್ಯತೆಯ ಮೇಲೆ ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ