ಭ್ರಷ್ಟಾಚಾರ ಮುಕ್ತ ಸರಕಾರ ನೀಡುವುದಾಗಿ ಘೋಷಿಸಿ ಅಧಿಕಾರಕ್ಕೆ ಬಂದ ಬಿಜೆಪಿ, ಹಲವು ಭ್ರಷ್ಟಾಚಾರದ ಆರೋಪಗಳನ್ನು ಹೊತ್ತಿರುವ ಸಚಿವ ಏಕನಾಥ್ ಖಾಡ್ಸೆಯವರ ಬಗ್ಗೆ .ಯಾಕೆ ಮೌನವಾಗಿದೆ ಎಂದು ಶಿವಸೇನೆ ವಾಗ್ದಾಳಿ ನಡೆಸಿದೆ.
ಬಿಜೆಪಿ ಹೈಕಮಾಂಡ್ ಖಾಡ್ಸೆಯವರ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಿದ್ದು, ಪಕ್ಷದ ಅಂತರಿಕ ವ್ಯವಹಾರಗಳಲ್ಲಿ ಶಿವಸೇನೆ ಮೂಗು ತೂರಿಸುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದೆ.
ಏಕನಾಥ್ ಖಾಡ್ಸೆ ಬಿಜೆಪಿಯ ಹಿರಿಯ ನಾಯಕರಾಗಿದ್ದು, ಅವರ ವಿರುದ್ಧದ ಆರೋಪಗಳಿಗೆ ಅವರೇ ಉತ್ತರಿಸಬೇಕಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಸಂಪುಟದ ಸಚಿವರ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ತಿಳಿಸಿದ್ದಾರೆ.
ಭ್ರಷ್ಟಾಚಾರ ಮುಕ್ತ ಸರಕಾರ ನೀಡುವುದಾಗಿ ಘೋಷಿಸಿ ಅಧಿಕಾರಕ್ಕೆ ಬಂದ ಬಿಜೆಪಿ,ಅಧಿಕಾರಕ್ಕೆ ಬಂದ ನಂತರ ತನ್ನ ಭರವಸೆಗಳಿಗೆ ತಿಲಾಂಜಲಿ ಇಟ್ಟಿದೆಯಾ ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿದೆ ಎಂದಿದ್ದಾರೆ.
ಒಂದು ವೇಳೆ, ಖಾಡ್ಸೆ ಯಾವುದೇ ತಪ್ಪು ಮಾಡಿಲ್ಲವೆಂದಾದಲ್ಲಿ ಮುಖ್ಯಮಂತ್ರಿಗಳು ಮುಂದೆ ಬಂದು ಹೇಳಿಕೆ ನೀಡಲಿ. ಇಲ್ಲವಾದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.