Webdunia - Bharat's app for daily news and videos

Install App

ಇಂದೇ ರಾಷ್ಟ್ರಪತಿ ಅಧಿಕಾರ ಸ್ವೀಕಾರ ಯಾಕೆ?

Webdunia
ಸೋಮವಾರ, 25 ಜುಲೈ 2022 (14:35 IST)
ನವದೆಹಲಿ : ದ್ರೌಪದಿ ಮುರ್ಮು ಅವರು ಇಂದು 15ನೇ ಭಾರತದ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಮೂಲಕ ಎರಡನೇ ಮಹಿಳಾ ರಾಷ್ಟ್ರಪತಿ ಹಾಗೂ ಬುಡಕಟ್ಟು ಜನಾಂಗದ ಮೊದಲ ರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. ಆದರೆ ಇವರು ಪ್ರಮಾಣವಚನ ಸ್ವೀಕರಿಸಿದ ಈ ದಿನಾಂಕಕ್ಕೂ ಹಾಗೂ ರಾಷ್ಟ್ರಪತಿ ಹುದ್ದೆಗೂ 1977ರಂದಲೂ ಅವಿನಾಭಾವ ನಂಟಿದೆ.

ಹೌದು. ಇದೇ ದಿನಾಂಕ ಅಂದರೆ ಜುಲೈ 25ರಂದು 10 ರಾಷ್ಟ್ರಪತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಕುತೂಹಲಕಾರಿ ವಿಷಯವೆನೆಂದರೆ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುವವರು ಇದೇ ದಿನಾಂಕದಂದು ಪ್ರಮಾಣ ವಚನ ಸ್ವೀಕರಿಸಬೇಕೆಂಬ ಯಾವುದೇ ಲಿಖಿತ ನಿಯಮಗಳಿಲ್ಲ.

ಇದಕ್ಕೆ ವ್ಯತಿರಿಕ್ತವಾಗಿ 1977ರ ಹಿಂದಿನ ರಾಷ್ಟ್ರಪತಿಗಳಾಗಿದ್ದ ರಾಜೇಂದ್ರ ಪ್ರಸಾದ್, ಸರ್ವಪಲ್ಲಿ ರಾಧಾಕೃಷ್ಣನ್, ಜಾಕೀರ್ ಹುಸೇನ್ ಹಾಗೂ ಫಕ್ರುದ್ದೀನ್ ಅಲಿ ಅಹಮದ್ ಅವರು ಬೇರೆ ಬೇರೆ ದಿನಾಂಕದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.

ದೇಶದಲ್ಲಿ ಮೊದಲ ರಾಷ್ಟ್ರಪತಿಯಾಗಿದ್ದ ರಾಜೇಂದ್ರ ಪ್ರಸಾದ್ ಅವರು 1950ರ ಜನವರಿ 26ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಸರ್ವಪಲ್ಲಿ ರಾಧಾಕೃಷ್ಣನ್ ಅವರು 1962ರ ಮೇ 13 ರಾಷ್ಟ್ರಪತಿ ಆಗಿ ಅಧಿಕಾರ ಸ್ವೀಕರಿಸಿದ್ದರು. ಅದಾದ ಬಳಿಕ ಜಾಕಿರ್ ಹುಸೇನ್ ಮತ್ತು ಫಕ್ರುದ್ದೀನ್ ಅಲಿ ಅಹ್ಮದ್ ಅವರು ಬೇರೆ ಬೇರೆ ದಿನಾಂಕದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರೂ, ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿಲ್ಲ. 

ಅದಾದ ಬಳಿಕ ಭಾರತದ ಆರನೇ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರು 1977ರ ಜುಲೈ 25ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ದ್ರೌಪದಿ ಮುರ್ಮು ಸೇರಿದಂತೆ ಎಲ್ಲಾ ರಾಷ್ಟ್ರಪತಿಗಳು ಇದೇ ದಿನಾಂಕದಂದೂ ಪ್ರಮಾಣವಚನ ಸ್ವೀಕರಿಸಿರುವುದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments