Publish Date: Tue, 07 Aug 2018 (09:18 IST)
Updated Date: Tue, 07 Aug 2018 (14:10 IST)
ನವದೆಹಲಿ: ಪ್ರಧಾನಿ ಮೋದಿ ಯಾಕೆ ಮುಸ್ಲಿಮರ ಟೋಪಿ ಧರಿಸಲ್ಲ? ಹೀಗಂತ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಶ್ನೆ ಮಾಡಿದ್ದಾರೆ.
ಪ್ರಧಾನಿ ಮೋದಿ ಎಲ್ಲವನ್ನೂ ಮಾಡ್ತಾರೆ. ಆದರೆ ಮುಸ್ಲಿಮರ ಟೋಪಿ ಯಾಕೆ ಧರಿಸಲ್ಲ ಎಂದು ಶಶಿ ತರೂರ್ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿಯವರನ್ನು ಲೇವಡಿ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಕಳೆದ ನಾಲ್ಕು ವರ್ಷಗಳ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಆಡಳಿತದಲ್ಲಿ ದೇಶದಲ್ಲಿ ಅಸಹಿಷ್ಣುತೆ, ಜಾತಿ ಧರ್ಮದ ಹೆಸರಲ್ಲಿ ಒಡೆದು ಆಳುವ ಪ್ರವೃತ್ತಿ ಹೆಚ್ಚಾಗಿದೆ ಎಂದು ಶಶಿ ತರೂರ್ ಆಪಾದಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಶಶಿ ತರೂರ್ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ವಿವಾದವೆಬ್ಬಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.