ನವದೆಹಲಿ: ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸೃಷ್ಟಿಯಾದ ಅನಾಹುತವನ್ನು ನಿರ್ವಹಿಸಲಾಗ ಸರ್ಕಾರ ಯಾವಾ ಕಾರಣಕ್ಕೆ ಸಾಧನಾ ಸಮಾವೇಶವನ್ನು ಆಚರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.
ಎಎನ್‌ಐ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಗುಂಡಿಗಳನ್ನು ತುಂಬಲು ತಮ್ಮ ಬಳಿ ಹಣವಿಲ್ಲ. ಕಾರ್ಮಿಕ ಇಲಾಖೆಯಲ್ಲಿ ವಾಲ್ಮೀಕಿ ಹಗರಣ, ಮುಡಾ ಹಗರಣ, ಹಗರಣ ನಡೆದಿದೆ. ಅವರ ಬಳಿ (ಕರ್ನಾಟಕ ಸರ್ಕಾರ) ಗುಂಡಿಗಳನ್ನು ತುಂಬಲು ಹಣವಿಲ್ಲ. ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಅವರು ಯಾವಾ ಸಾಧನಾ ಸಮಾವೇಶವನ್ನು ಆಚರಿಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಬೆಂಗಳೂರಿನಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ. ತೀವ್ರ ಜಲಾವೃತವು ಬೆಂಗಳೂರಿನ ಹಲವಾರು ಭಾಗಗಳಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ, ಬಿಜೆಪಿ ನಾಯಕರು ಈಗ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಪರಿಸ್ಥಿತಿಯನ್ನು ತಪ್ಪಾಗಿ ನಿಭಾಯಿಸಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್‌ನವರು ಗ್ರೇಟ್ ಬೆಂಗಳೂರು, ಬ್ರ್ಯಾಂಡ್ ಬೆಂಗಳೂರು ಎಂದು ಕರೆಯುತ್ತಿದ್ದಾರೆ ಆದರೆ ಈಗ ಕೆಟ್ಟ ಬೆಂಗಳೂರು ಎಂಬಂತಾಗಿದೆ ಎಂದು ಬಿಜೆಪಿ ಮುಖಂಡ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿದರು.