Publish Date: Fri, 14 Sep 2018 (11:33 IST)
Updated Date: Fri, 14 Sep 2018 (11:35 IST)
ಲಕ್ನೋ: ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಅಪ್ರಾಪ್ತ ಪುತ್ರಿಯ ಮೇಲೆ ಈ ಪಾಪಿ ತಂದೆ ಕಳೆದ ಆರು ತಿಂಗಳಿನಿಂದ ಅತ್ಯಾಚಾರವೆಸಗುತ್ತಿದ್ದ ಎನ್ನಲಾಗಿದೆ. ಆದರೆ ಈ ಬಾರಿ ಪತ್ನಿಯ ಕಣ್ಣಿಗೆ ಈತನ ನೀಚ ಕೃತ್ಯ ಬಿತ್ತು. ಆಗ ತನ್ನ ಹೇಯ ಕೃತ್ಯವನ್ನು ಬಹಿರಂಗಪಡಿಸದಂತೆ ಈ ಪಾಪಿ ತಂದೆ ಪುತ್ರಿ ಮತ್ತು ಪತ್ನಿಗೆ ಬೆದರಿಕೆ ಹಾಕಿದ್ದ.
ಆದರೂ ಆತನ ಬೆದರಿಕೆಗೆ ಜಗ್ಗದ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಅಪ್ರಾಪ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗುತ್ತಿದ್ದು, ಆರೋಪಿ ತಂದೆಗಾಗಿ ಹುಡುಕಾಟ ಮುಂದುವರಿದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.